ಬುಧವಾರ, ಆಗಸ್ಟ್ 10, 2022
24 °C

Covid India Update | ದೈನಂದಿನ ಪ್ರಕರಣಗಳ ಸಂಖ್ಯೆ ಇಳಿಮುಖ, 17 ಮಂದಿ ಸಾವು

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಾದ್ಯಂತ ಕಳೆದ 24 ಗಂಟೆಗಳಲ್ಲಿ 9,923 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, 17 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. 

ಇದರೊಂದಿಗೆ ಸೋಂಕಿತರ ಸಂಖ್ಯೆ 4,33,19,396 ಕ್ಕೆ ಏರಿಕೆಯಾಗಿದೆ. ಆ ಪೈಕಿ 5,24,890 ಮಂದಿ ಸಾವಿಗೀಡಾಗಿದ್ದಾರೆ. 

ಇದುವರೆಗೆ 4,27,15,193 ಮಂದಿ ಗುಣಮುಖರಾಗಿದ್ದಾರೆ. ಸದ್ಯ ದೇಶದಲ್ಲಿ 79,313 ಸಕ್ರಿಯ ಪ್ರಕರಣಗಳಿದ್ದು, ದೈನಂದಿನ ಪಾಸಿಟಿವಿಟಿ ದರ ಶೇ 2.55 ರಷ್ಟಿದೆ.

ಮಹಾರಾಷ್ಟ್ರದಲ್ಲಿ 24,613, ಕೇರಳದಲ್ಲಿ 23,145, ದೆಹಲಿಯಲ್ಲಿ 5,375, ಕರ್ನಾಟಕದಲ್ಲಿ 4,928, ತಮಿಳುನಾಡಿನಲ್ಲಿ 3,951, ಹರಿಯಾಣದಲ್ಲಿ 3,103, ಉತ್ತರ ಪ್ರದೇಶದಲ್ಲಿ 2,825 ಸಕ್ರಿಯ ಪ್ರಕರಣಗಳಿವೆ.

ದೇಶದಾದ್ಯಂತ ಒಟ್ಟು 196.32 ಕೋಟಿ ಕೋವಿಡ್ ಲಸಿಕೆ ವಿತರಣೆ ಮಾಡಲಾಗಿದೆ.

ಕರ್ನಾಟಕದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಸೋಮವಾರ ತುಸು ಕಡಿಮೆಯಾಗಿದ್ದು, ಬೆಂಗಳೂರಿನಲ್ಲಿ 494 ಸೇರಿದಂತೆ ರಾಜ್ಯದಲ್ಲಿ 530 ಮಂದಿ ಹೊಸದಾಗಿ ಕೋವಿಡ್ ಪೀಡಿತರಾಗಿದ್ದಾರೆ. ಭಾನುವಾರ 623 ಪ್ರಕರಣಗಳು ದೃಢಪಟ್ಟಿದ್ದವು.

ಐದು ಅಡಿ ಉದ್ದದ ಕೊಳಕ ಮಂಡಲವನ್ನು ನುಂಗಿದ ದೈತ್ಯ ನಾಗರ ಹಾವು: ವಿಡಿಯೊ ವೈರಲ್

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು