ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

India COVID-19 Update: 1,685 ಹೊಸ ಪ್ರಕರಣ, 83 ಸಾವು

Last Updated 25 ಮಾರ್ಚ್ 2022, 4:38 IST
ಅಕ್ಷರ ಗಾತ್ರ

ನವದೆಹಲಿ: 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,685 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ಸೋಂಕಿತರ ಒಟ್ಟು ಸಂಖ್ಯೆ 4,30,16,372ಕ್ಕೆ ಏರಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಒಂದೇ ದಿನ 83 ಸೋಂಕಿತರು ಸಾವಿಗೀಡಾಗಿದ್ದು, ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 5,16,755ಕ್ಕೆ ಜಿಗಿದಿದೆ.

ದೇಶದಲ್ಲಿ ಸದ್ಯ 21,530 ಸಕ್ರಿಯ ಕೋವಿಡ್ ಪ್ರಕರಣಗಳಿವೆ.

ಒಟ್ಟು ಸೋಂಕಿತರ ಪೈಕಿ ಶೇಕಡ 0.05 ರಷ್ಟು ಸಕ್ರಿಯ ಪ್ರಕರಣಗಳಿವೆ. ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇಕಡ 98.75 ರಷ್ಟಿದೆ.

ಈವರೆಗೆ ದೇಶದಲ್ಲಿ 182.55 ಕೋಟಿ ಡೋಸ್ ಲಸಿಕೆ ವಿತರಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT