ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Updates: ಮೇ 14ರಿಂದೀಚೆಗೆ 100ಕ್ಕಿಂತ ಕಡಿಮೆ ಜನರ ಸಾವು

Last Updated 2 ಫೆಬ್ರುವರಿ 2021, 5:15 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 8,635 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 94 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 1,07,66,245 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,54,486 ಮಂದಿ ಸಾವಿಗೀಡಾಗಿದ್ದಾರೆ.

1,04,48,406 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 1,63,353 ಸಕ್ರಿಯ ಪ್ರಕರಣಗಳಿವೆ. ಈವರೆಗೆ 39 (39,50,156) ಲಕ್ಷಕ್ಕೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ.

ಕಳೆದ ವರ್ಷದ ಮೇ 14ರಿಂದೀಚೆಗೆ ಇದೇ ಮೊದಲ ಬಾರಿಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆಯು 100ಕ್ಕಿಂತ ಕಡಿಮೆಯಿದೆ. ಜೂನ್ 8ರಿಂದೀಚೆಗೆ ಸೋಂಕು ಪ್ರಕರಣಗಳು ಕೂಡ ಕಡಿಮೆ ದಾಖಲಾಗಿವೆ.

ಫೆ. 02ರ ಹೊತ್ತಿಗೆ ದೇಶದಲ್ಲಿ 19,77,52,057 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಮವಾರ ಒಂದೇ ದಿನ 6,59,422 ಮಾದರಿಗಳು ಪರೀಕ್ಷೆಗೆ ಒಳಪಟ್ಟಿವೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್‌) ತಿಳಿಸಿದೆ.

39 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ

ದೇಶದಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ದೊರೆತು 15 ದಿನಗಳು ಕಳೆದಿದ್ದು, ಈವರೆಗೂ ಬರೋಬ್ಬರಿ 39 ಲಕ್ಷಕ್ಕೂ ಅಧಿಕ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಈ ಪೈಕಿ ಉತ್ತರ ಪ್ರದೇಶ ಮೊದಲ ಸ್ಥಾನದಲ್ಲಿದ್ದರೆ, ರಾಜಸ್ಥಾನ, ಕರ್ನಾಟಕ ಮತ್ತು ಮಹಾರಾಷ್ಟ್ರ ನಂತರದ ಸ್ಥಾನಗಳನ್ನು ಪಡೆದಿರುವುದಾಗಿ ಆರೋಗ್ಯ ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT