ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Updates: 12,408 ಹೊಸ ಪ್ರಕರಣ, 120 ಜನ ಸಾವು

Last Updated 5 ಫೆಬ್ರುವರಿ 2021, 7:59 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 12,408 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 120 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ ಒಟ್ಟು 1,08,02,591 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,54,823 ಮಂದಿ ಸಾವಿಗೀಡಾಗಿದ್ದಾರೆ.

1,04,96,308 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 1,51,460 ಸಕ್ರಿಯ ಪ್ರಕರಣಗಳಿವೆ.

ಫೆ. 04ರ ಹೊತ್ತಿಗೆ ದೇಶದಲ್ಲಿ 19,99,31,795 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಸೋಮವಾರ ಒಂದೇ ದಿನ 7,15,776 ಮಾದರಿಗಳು ಪರೀಕ್ಷೆಗೆ ಒಳಪಟ್ಟಿವೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್‌) ತಿಳಿಸಿದೆ.

49 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆ

ದೇಶದಲ್ಲಿ ಲಸಿಕಾ ಅಭಿಯಾನಕ್ಕೆ ಚಾಲನೆ ದೊರೆತ ದಿನದಿಂದ ಈವರೆಗೆ 49 (49,59,445) ಲಕ್ಷಕ್ಕೂ ಅಧಿಕ ಆರೋಗ್ಯ ಕಾರ್ಯಕರ್ತರಿಗೆ ಕೋವಿಡ್ ಲಸಿಕೆಯನ್ನು ನೀಡಲಾಗಿದೆ. ಲಸಿಕೆ ಪಡೆದ ಜನರಲ್ಲಿ ಅದರ ಬಗ್ಗೆ ಪ್ರತಿಕ್ರಿಯೆ ನೀಡಿದ ಶೇ 97ಕ್ಕೂ ಹೆಚ್ಚು ಜನರು ಒಟ್ಟಾರೆ ಅನುಭವದ ಬಗ್ಗೆ ತೃಪ್ತಿಯನ್ನು ವ್ಯಕ್ತಪಡಿಸಿದ್ದಾರೆ, ಆದರೆ ಶೇ 11ರಷ್ಟು ಜನರು ಲಸಿಕೆ ಪಡೆದ ನಂತರದ ಪ್ರತಿಕೂಲ ಪರಿಣಾಮಗಳ ಬಗ್ಗೆ ತಮಗೆ ತಿಳಿಸಿಲ್ಲ ಎಂದು ಹೇಳಿದ್ದಾರೆ.

ಪ್ರತಿಕ್ರಿಯೆ ಪಡೆಯಲು ಸರ್ಕಾರ 37 ಲಕ್ಷ ಜನರನ್ನು ಸಂಪರ್ಕಿಸಿದರೆ, ಅದರಲ್ಲಿ 5,12,128 ಜನರು ಪ್ರತಿಕ್ರಿಯಿಸಿದ್ದಾರೆ.ಇಲ್ಲಿಯವರೆಗೆ 8,563 ವ್ಯಕ್ತಿಗಳಲ್ಲಿ ಅಡ್ಡಪರಿಣಾಮಗಳು ಕಾಣಿಸಿಕೊಂಡಿರುವುದು ವರದಿಯಾಗಿದೆ. ಇದು ಲಸಿಕೆ ಹಾಕಿದ ವ್ಯಕ್ತಿಗಳಲ್ಲಿ ಶೇ 0.2 ರಷ್ಟಾಗಿದ್ದು, 34 ಜನರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT