Covid-19 India Updates: 11,800 ಹೊಸ ಕೊರೊನಾ ಪ್ರಕರಣ, 84 ಸೋಂಕಿತರು ಸಾವು

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 11,800 ಕ್ಕೂ ಹೆಚ್ಚಿನ ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿದ್ದು, 84 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ಈವರೆಗೆ ಒಟ್ಟು 1,08,38,194 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,55,080 ಮಂದಿ ಸಾವಿಗೀಡಾಗಿದ್ದಾರೆ.
1,05,34,505 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 1,48,609 ಸಕ್ರಿಯ ಪ್ರಕರಣಗಳಿವೆ. ಈವರೆಗೆ 39 (39,50,156) ಲಕ್ಷಕ್ಕೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ.
COVID-19 Testing Update. For more details visit: https://t.co/FQhg5Mn8Qn @MoHFW_INDIA @DeptHealthRes
#ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/8woWzElB2w— ICMR (@ICMRDELHI) February 8, 2021
ಫೆ. 08ರ ಹೊತ್ತಿಗೆ ದೇಶದಲ್ಲಿ 20,19,00,614 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಭಾನುವಾರ ಒಂದೇ ದಿನ 5,32,236 ಮಾದರಿಗಳು ಪರೀಕ್ಷೆಗೆ ಒಳಪಟ್ಟಿವೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್) ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.