ಶುಕ್ರವಾರ, ಏಪ್ರಿಲ್ 23, 2021
24 °C

Covid-19 India Update: ದೇಶದಲ್ಲಿ ಒಂದೇ ದಿನ 25 ಸಾವಿರಕ್ಕೂ ಹೆಚ್ಚು ಪ್ರಕರಣಗಳು

ಪ್ರಜಾವಾಣಿ ವೆಬ್ ಡೆಸ್ಕ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಭಾನುವಾರ ಒಂದೇ ದಿನದಲ್ಲಿ 25,320 ಕೋವಿಡ್‌–19 ಪ್ರಕರಣಗಳು ದೃಢಪಟ್ಟಿವೆ.

ಇದು ಕಳೆದ 84 ದಿನಗಳಲ್ಲೇ ದಾಖಲಾದ ಗರಿಷ್ಠ ಪ್ರಕರಣಗಳಾಗಿವೆ. ಮಹಾರಾಷ್ಟ್ರದಲ್ಲೇ 15,602 ಮತ್ತು ಕೇರಳದಲ್ಲಿ ಎರಡು ಸಾವಿರಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ. ಇದರಿಂದ, ಒಟ್ಟು ಪ್ರಕರಣಗಳ ಸಂಖ್ಯೆ 1.13 ಕೋಟಿ ದಾಟಿದೆ.

ಭಾನುವಾರ 161 ಸೋಂಕಿತರು ಸಾವಿಗೀಡಾಗಿದ್ದಾರೆ. ಇವರಲ್ಲಿ ಮಹಾರಾಷ್ಟ್ರದಲ್ಲಿ 88, ಪಂಜಾಬ್‌ನಲ್ಲಿ 22 ಮತ್ತು ಕೇರಳದ 12 ಮಂದಿ ಸೇರಿದ್ದಾರೆ. ಇದರಿಂದಾಗಿ ಸಾವಿಗೀಡಾದವರ ಸಂಖ್ಯೆ 1.58 ಲಕ್ಷ ದಾಟಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

‘ಬೆಂಗಳೂರು, ಚೆನ್ನೈ ಮತ್ತು ಮುಂಬೈ ಮಹಾನಗರಗಳಲ್ಲಿಯೂ ಅತಿ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ. ಕಳೆದ ಕೆಲವು ವಾರಗಳಿಂದ 16 ರಾಜ್ಯಗಳ ಪೈಕಿ 11 ರಾಜ್ಯಗಳಲ್ಲಿ ಅತಿ ಹೆಚ್ಚು ಸಕ್ರಿಯ ಪ್ರಕರಣಗಳಿವೆ’ ಎಂದು ಚೆನ್ನೈನಲ್ಲಿರುವ ಗಣಿತ ವಿಜ್ಞಾನಗಳ ಸಂಸ್ಥೆಯ ವಿಜ್ಞಾನಿ ಸೀತಾಭ್ರಾ ಸಿನ್ಹಾ ತಿಳಿಸಿದ್ದಾರೆ.

ಕೋವಿಡ್‌ ಪ್ರಕರಣಗಳು ಹೆಚ್ಚಾಗುತ್ತವೆ ಎಂದು ಸಿನ್ಹಾ ಎರಡು ವಾರಗಳ ಹಿಂದೆ ಮಾಹಿತಿ ನೀಡಿದ್ದರು. ಮುಂದಿನ ದಿನಗಳಲ್ಲಿ ಮಹಾ
ರಾಷ್ಟ್ರ ಮತ್ತು ಪಂಜಾಬ್‌ ಜತೆಯಲ್ಲಿ ಗುಜರಾತ್‌, ಛತ್ತೀಸಗಡ, ಹರಿಯಾಣ, ರಾಜಸ್ಥಾನ, ದೆಹಲಿ ಮತ್ತು ಉತ್ತರಾಖಂಡದಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚಾಗುವ ಸಾಧ್ಯತೆಗಳಿವೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು