ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳ, ಎಲ್ಲೆಲ್ಲಿ ಎಷ್ಟು?

Last Updated 20 ಮಾರ್ಚ್ 2021, 6:22 IST
ಅಕ್ಷರ ಗಾತ್ರ

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 40,953 ಹೊಸ ಕೊರೊನಾ ಸೋಂಕು ಪ್ರಕರಣಗಳು ದಾಖಲಾಗಿವೆ. 188 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ದೇಶದಲ್ಲಿ ಈವರೆಗೆ ಒಟ್ಟು 1,15,55,284 ಪ್ರಕರಣಗಳು ಬೆಳಕಿಗೆ ಬಂದಿದ್ದು, 1,59,558 ಮಂದಿ ಸಾವಿಗೀಡಾಗಿದ್ದಾರೆ.

ಈವರೆಗೂ 1,11,07,332 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದು, 2,88,394 ಸಕ್ರಿಯ ಪ್ರಕರಣಗಳಿವೆ. ಈವರೆಗೆ 4. 20 (4,20,63,392) ಕೋಟಿಗೂ ಅಧಿಕ ಜನರಿಗೆ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮಾ. 19ರ ಹೊತ್ತಿಗೆ ದೇಶದಲ್ಲಿ 23,24,31,517 ಮಾದರಿಗಳನ್ನು ಪರೀಕ್ಷಿಸಲಾಗಿದೆ. ಶುಕ್ರವಾರ ಒಂದೇ ದಿನ 10,60,971 ಮಾದರಿಗಳು ಪರೀಕ್ಷೆಗೆ ಒಳಪಟ್ಟಿವೆ ಎಂದು ಭಾರತೀಯ ವೈದ್ಯಕೀಯ ಅಧ್ಯಯನ ಸಂಸ್ಥೆ (ಐಸಿಎಂಆರ್‌) ತಿಳಿಸಿದೆ.

ಸೋಂಕು ಪ್ರಕರಣಗಳ ಪೈಕಿ ಮೊದಲನೇ ಸ್ಥಾನದಲ್ಲಿರುವ ಮಹಾರಾಷ್ಟ್ರದಲ್ಲಿ ಒಟ್ಟಾರೆ 24,22,021 ಜನರಿಗೆ ಸೋಂಕು ತಗುಲಿದ್ದು, 1,78,848 ಸಕ್ರಿಯ ಪ್ರಕರಣಗಳಿವೆ. ಈವರೆಗೆ 21,89,965 ಜನರು ಸೋಂಕಿನಿಂದ ಗುಣಮುಖರಾಗಿದ್ದು, 53,208 ಜನರು ಸಾವಿಗೀಡಾಗಿದ್ದಾರೆ.

ಎರಡನೇ ಸ್ಥಾನದಲ್ಲಿರುವ ಕೇರಳದಲ್ಲಿ ಒಟ್ಟಾರೆ 11,00,275 ಜನರಿಗೆ ಸೋಂಕು ತಗುಲಿದೆ. 25,465 ಸಕ್ರಿಯ ಪ್ರಕರಣಗಳೊಂದಿಗೆ 10,70,343 ಜನರು ಗುಣಮುಖರಾಗಿದ್ದು, 4,467 ಜನರು ಸಾವಿಗೀಡಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT