ಭಾನುವಾರ, ಮೇ 16, 2021
22 °C

Covid-19 India Update: 3.32 ಲಕ್ಷ ಹೊಸ ಪ್ರಕರಣ, 2,263 ಸಾವು

ಪಿಟಿಐ‌ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಆಮ್ಲಜನಕದ ಕೊರತೆ, ರೆಮ್‌ಡಿಸಿವಿರ್ ಚುಚ್ಚುಮದ್ದಿನ ಹಾಹಾಕಾರದ ನಡುವೆ ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 2,263 ಸಾವುಗಳು ಸಂಭವಿಸಿದ್ದು, ಹೊಸ ಕೋವಿಡ್ ಪ್ರಕರಣಗಳಲ್ಲಿ ದಾಖಲೆಯ ಏರಿಕೆ ಕಂಡಿದೆ.

ಕೇಂದ್ರ ಆರೋಗ್ಯ ಸಚಿವಾಲಯ ಬಿಡುಗಡೆ ಮಾಡಿರುವ ಮಾಹಿತಿಯ ಪ್ರಕಾರ, 3,32,730 ಹೊಸ ಪ್ರಕರಣ ದಾಖಲಾಗಿವೆ. ಇದು ವಿಶ್ವದಾದ್ಯಂತ ಒಂದೇ ದಿನದಲ್ಲಿ ದಾಖಲಾದ ಅತಿ ದೊಡ್ಡ ಸಂಖ್ಯೆಯಾಗಿದೆ.

ಈ ಮೂಲಕ, ದೇಶದಲ್ಲಿ ಒಟ್ಟು ಕೋವಿಡ್ ಸಕ್ರಿಯ ಪ್ರಕರಣಗಳ ಸಂಖ್ಯೆ 24,28,616 ಕ್ಕೆ ಏರಿದೆ ಮತ್ತು ಒಟ್ಟು ಪ್ರಕರಣಗಳ ಸಂಖ್ಯೆ 1.63 ಕೋಟಿಗೆ ತಲುಪಿದೆ.

ಇದನ್ನೂ ನೋಡಿ: ಏಳು ಟ್ಯಾಂಕರ್‌ಗಳಲ್ಲಿ ಆಮ್ಲಜನಕ ಹೊತ್ತು ಮಹಾರಾಷ್ಟ್ರಕ್ಕೆ ತೆರಳಿದ ’ಆಕ್ಸಿಜನ್ ಎಕ್ಸ್‌ಪ್ರೆಸ್’

ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 1,86,920ಕ್ಕೆ ಏರಿದೆ. ದೇಶದಾದ್ಯಂತ ಒಟ್ಟು 13,54,78,420 ಡೋಸ್ ಲಸಿಕೆಗಳನ್ನು ಫಲಾನುಭವಿಗಳಿಗೆ ನೀಡಲಾಗಿದೆ.

ಶುಕ್ರವಾರ, ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದ 25 ಸಾವುಗಳು ಸಂಭವಿಸಿವೆ. ಇನ್ನೂ 60 ರೋಗಿಗಳು ಅಪಾಯದಲ್ಲಿದ್ದಾರೆ ಎಂದು ವರದಿಯಾಗಿದೆ. ಇತ್ತ, ಮಹಾರಾಷ್ಟ್ರದ ವಸಾಯಿ ವಿರಾರ್‌ನ ಕೋವಿಡ್ -19 ಕೇಂದ್ರದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ 13 ಮಂದಿ ಮೃತಪಟ್ಟಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು