ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದಿಂದ ನೇಪಾಳ, ಮ್ಯಾನ್ಮಾರ್, ಇರಾನ್‌ಗೆ ಕೋವಿಡ್‌ ಲಸಿಕೆಗಳ ರಫ್ತು ಆರಂಭ

Last Updated 15 ಅಕ್ಟೋಬರ್ 2021, 2:59 IST
ಅಕ್ಷರ ಗಾತ್ರ

ನವದೆಹಲಿ: ‘ಭಾರತದಿಂದ ಕೋವಿಡ್‌–19 ಲಸಿಕೆಗಳನ್ನು ನೇಪಾಳ, ಮ್ಯಾನ್ಮಾರ್ ಮತ್ತು ಇರಾನ್‌ ರಾಷ್ಟ್ರಗಳಿಗೆ ರಫ್ತು ಮಾಡಲಾಗಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ತಿಳಿಸಿದೆ.

‘ಭಾರತ ಸರ್ಕಾರ ನೆರೆ ರಾಷ್ಟ್ರಗಳಿಗೆ ಕೋವಿಡ್‌ ಲಸಿಕೆಗಳನ್ನು ರಫ್ತು ಮಾಡುವುದನ್ನು ಪುನರಾರಂಭಿಸಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.

ಭಾರತ ವಿಶ್ವದಲ್ಲೇ ಅತಿ ಹೆಚ್ಚು ಲಸಿಕೆಗಳನ್ನು ಉತ್ಪಾದಿಸುವ ರಾಷ್ಟ್ರವಾಗಿದೆ. ಈ ವರ್ಷದ ಏಪ್ರಿಲ್‌ನಲ್ಲಿ ದೇಶದಲ್ಲಿ ಕೋವಿಡ್‌ ಸೋಂಕು ಪ್ರಕರಣಗಳು ಗಣನೀಯ ಪ್ರಮಾಣದಲ್ಲಿ ಏರಿಕೆಯಾದ ಕಾರಣಕ್ಕೆ ಲಸಿಕೆಗಳನ್ನು ವಿದೇಶಗಳಿಗೆ ರಫ್ತು ಮಾಡುವುದನ್ನು ಸ್ಥಗಿತಗೊಳಿಸಲಾಗಿತ್ತು. ಜತೆಗೆ ದೇಶದ ಜನರಿಗೆ ಲಸಿಕೆ ನೀಡುವಿಕೆಗೆ ಹೆಚ್ಚು ಒತ್ತು ನೀಡಲಾಗಿತ್ತು.

ಇತ್ತೀಚೆಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮಾತನಾಡಿದ್ದ ಪ್ರಧಾನಿ ನರೇಂದ್ರ ಮೋದಿ, ‘ಭಾರತವು ವಿದೇಶಗಳಿಗೆ ಕೋವಿಡ್‌ ಲಸಿಕೆಗಳ ಪೂರೈಕೆಯನ್ನು ಪುನರಾರಂಭಿಸುವುದಾಗಿ ಭರವಸೆ ನೀಡಿದ್ದರು. ಆದರಂತೆ ನಾವು ಮೊದಲಿಗೆ ನೆರೆರಾಷ್ಟ್ರಗಳಿಗೆ ಲಸಿಕೆಗಳನ್ನು ರಫ್ತು ಮಾಡಲು ನಿರ್ಧರಿಸಿದ್ದೇವೆ’ ಎಂದು ಬಾಗ್ಚಿ ಹೇಳಿದ್ದಾರೆ.

ದೇಶದಲ್ಲಿ ಲಸಿಕೆಗಳ ಉತ್ಪಾದನೆ ಮತ್ತು ಬೇಡಿಕೆ ಆಧರಿಸಿ ಇತರೆ ರಾಷ್ಟ್ರಗಳಿಗೆ ಲಸಿಕೆಗಳನ್ನು ಪೂರೈಕೆ ಮಾಡುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಬಾಗ್ಚಿ ತಿಳಿಸಿದ್ದಾರೆ.

ಸದ್ಯ ಭಾರತದಲ್ಲಿ ಕೊರೊನಾ ಸೋಂಕು ನಿಯಂತ್ರಣಕ್ಕೆ ಬಂದಿರುವ ಹಿನ್ನಲೆಯಲ್ಲಿ ಲಸಿಕೆಗಳನ್ನು ವಿದೇಶಗಳಿಗೆ ಶೀಘ್ರವೇ ರಫ್ತು ಮಾಡಲಾಗುವುದು ಎಂದು ಇತ್ತೀಚೆಗೆ ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯ ತಿಳಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT