ಭಾನುವಾರ, ಜನವರಿ 17, 2021
27 °C

ಪೂರ್ವ ಲಡಾಖ್‌: ಬಂಧಿತ ಸೈನಿಕ ಚೀನಾಗೆ ಹಸ್ತಾಂತರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಮೂರು ದಿನಗಳ ಹಿಂದೆ ಪೂರ್ವ ಲಡಾಖ್‌ ಪ್ರದೇಶದಲ್ಲಿ ಭಾರತದ ಸೈನಿಕರು ಬಂಧಿಸಿದ್ದ ಚೀನಾದ ಸೈನಿಕನನ್ನು ಸೋಮವಾರ ಚೀನಾಕ್ಕೆ ಹಸ್ತಾಂತರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಚೀನಾದ ಪೀಪಲ್ಸ್‌ ಲಿಬರೇಷನ್ ಆರ್ಮಿ(ಪಿಎಲ್‌ಎ)ಗೆ ಸೇರಿದ ಸೈನಿಕನನ್ನು ಶುಕ್ರವಾರ ಬೆಳಿಗ್ಗೆ ಪೂರ್ವ ಲಡಾಖ್‌ನ ಪಾಗೊಂಗ್‌ ತ್ಸೊದ ದಕ್ಷಿಣ ಭಾಗದಲ್ಲಿ ಬಂಧಿಸಲಾಗಿತ್ತು. ಈತ ವಾಸ್ತವಿಕ ಗಡಿ ನಿಯಂತ್ರಣ ರೇಖೆಯನ್ನು ದಾಟಿ ಅಕ್ರಮವಾಗಿ ಭಾರತವನ್ನು ಪ್ರವೇಶಿಸುತ್ತಿದ್ದಕ್ಕಾಗಿ ಬಂಧಿಸಲಾಗಿತ್ತು.

ಪೂರ್ವ ಲಡಾಖ್‌ನ ಚುಶಲ್‌– ವೊಲ್ಡೊ ಗಡಿ ಭಾಗದಲ್ಲಿ ಸೋಮವಾರ ಬೆಳಿಗ್ಗೆ 10.10 ಗಂಟೆಗೆ ಬಂಧಿತ ಸೈನಿಕನನ್ನು ಚೀನಾಗೆ ಹಸ್ತಾಂತರಿಸಲಾಯಿತು  ಎಂದು ಮೂಲಗಳು ತಿಳಿಸಿವೆ.

ಪೂರ್ವ ಲಾಡಾಖ್‌ನ ಗಡಿಯಲ್ಲಿ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ನಿಯಂತ್ರಿಸಲು ಎರಡೂ ದೇಶಗಳು ವಾಸ್ತವ ನಿಯಂತ್ರಣ ರೇಖೆ ಉದ್ದಕ್ಕೂ ಸೈನಿಕರನ್ನು ಜಮಾವಣೆ ಮಾಡಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು