ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದಲ್ಲಿ ಮೊದಲಿಗೆ ಆರೋಗ್ಯ ಸಿಬ್ಬಂದಿಗೆ ಕೋವಿಡ್ ಲಸಿಕೆ; ಸಿದ್ಧವಾಗಲಿದೆ ದತ್ತಾಂಶ

Last Updated 23 ಅಕ್ಟೋಬರ್ 2020, 15:57 IST
ಅಕ್ಷರ ಗಾತ್ರ

ಮುಂಬೈ/ ಭುವನೇಶ್ವರ: ತುರ್ತಾಗಿ ದೇಶದ ಎಲ್ಲ ಸರ್ಕಾರಿ ಮತ್ತು ಖಾಸಗಿ ಆರೋಗ್ಯ ಸಿಬ್ಬಂದಿಯ ದತ್ತಾಂಶ ಸಿದ್ಧಪಡಿಸಲಾಗುತ್ತಿದ್ದು, ಕೋವಿಡ್‌–19 ಲಸಿಕೆ ಲಭ್ಯವಾಗುತ್ತಿದ್ದಂತೆ ಶೀಘ್ರವಾಗಿ ಅವರಿಗೆ ನೀಡಲು ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಲಸಿಕೆ ಲಭ್ಯವಾಗುತ್ತಿದ್ದಂತೆ ದೇಶದ ಎಲ್ಲ 130 ಕೋಟಿ ಜನರಿಗೂ ತಲುಪುವಂತೆ ಮಾಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಆದರೆ, ಮೊದಲಿಗೆ ಆರೋಗ್ಯ ಸಿಬ್ಬಂದಿಗೆ ಲಸಿಕೆ ನೀಡಲಾಗುತ್ತದೆ.

ಮುಂದಿನ ವರ್ಷ ಜುಲೈ ಹೊತ್ತಿಗೆ 20–25 ಕೋಟಿ ಜನರಿಗೆ ಲಸಿಕೆ ಹಾಕುವ ಗುರಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಹೊಂದಿದೆ.

'ಭಾರತ ಸರ್ಕಾರದಿಂದಲೇ ಎಲ್ಲ ರಾಜ್ಯಗಳಿಗೂ ಲಸಿಕೆ ಉಚಿತವಾಗಿ ಪೂರೈಕೆಯಾಗುವ ಸಾಧ್ಯತೆಯಿದೆ' ಎಂದು ಒಡಿಶಾದ ಆರೋಗ್ಯ ಇಲಾಖೆ ಅಧಿಕಾರಿ ಪ್ರದಿಪ್ತ ಮೊಹಪಾತ್ರ ಹೇಳಿರುವುದಾಗಿ ರಾಯಿಟರ್ಸ್‌ ವರದಿ ಮಾಡಿದೆ.

ಸರ್ಕಾರಿ ಮತ್ತು ಖಾಸಗಿ ವಲಯದ ಆರೋಗ್ಯ ಸಿಬ್ಬಂದಿಗೆ ಮೊದಲಿಗೆ ಲಸಿಕೆ ನೀಡಲಾಗುತ್ತಿದೆ. ಇಡೀ ದೇಶಕ್ಕೆ ಏಕರೂಪದ ನೀತಿ ಅನ್ವಯವಾಗಲಿದೆ. ಮುಂದಿನ ಶುಕ್ರವಾರದೊಳಗೆ ಕೇಂದ್ರ ಸರ್ಕಾರಕ್ಕೆ ರಾಜ್ಯಗಳಿಂದ ಆರೋಗ್ಯ ಸಿಬ್ಬಂದಿಯ ವಿವರ ತಲುಪಬೇಕಿದೆ ಎಂದಿದ್ದಾರೆ.

ಭಾರತ ಲಸಿಕೆ ತಯಾರಿಸುವ ಅತಿ ದೊಡ್ಡ ಸಾಮರ್ಥ್ಯ ಹೊಂದಿದ್ದು, ಸೆರಂ ಇನ್‌ಸ್ಟಿಟ್ಯೂಟ್‌ ಆಫ್‌ ಇಂಡಿಯಾ ಕೋವಿಡ್–19 ಲಸಿಕೆಯ 20 ಕೋಟಿ ಡೋಸ್‌ಗಳನ್ನು ಬಡ ರಾಷ್ಟ್ರಗಳಿಗಾಗಿ ತಯಾರಿಸಲು ಪಣ ತೊಟ್ಟಿದೆ.

ಜಾಗತಿಕವಾಗಿ ಭಾರತ ಕೊರೊನಾ ವೈರಸ್‌ ಸೋಂಕು ಪ್ರಕರಣಗಳ ಪೈಕಿ ಎರಡನೇ ಸ್ಥಾನದಲ್ಲಿದೆ. ಒಟ್ಟು ಕೋವಿಡ್‌–19 ಪ್ರಕರಣಗಳು 78 ಲಕ್ಷ ದಾಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT