ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: 2,59,591 ಹೊಸ ಪ್ರಕರಣ, ಚೇತರಿಕೆ ಪ್ರಮಾಣ ಹೆಚ್ಚಳ

Last Updated 21 ಮೇ 2021, 5:06 IST
ಅಕ್ಷರ ಗಾತ್ರ

ನವದೆಹಲಿ: 24 ಗಂಟೆಗಳಲ್ಲಿ ದೇಶದಲ್ಲಿ 2,59,591 ಹೊಸ ಕೋವಿಡ್ ಪ್ರಕರಣಗಳು ದೃಢಪಟ್ಟಿದ್ದು, ‌‌4,209 ಸಾವು ಸಂಭವಿಸಿವೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

ಹೀಗಾಗಿ, ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,60,31,991ಕ್ಕೆ ಏರಿಕೆಯಾಗಿದೆ. ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 2,91,331ಕ್ಕೆ ಮುಟ್ಟಿದೆ. 30,27,925 ಸಕ್ರಿಯ ಪ್ರಕರಣಗಳಿದ್ದು, ಒಟ್ಟು ಸೋಂಕಿತರ ಪೈಕಿ ಶೇ.11.63ರಷ್ಟಾಗಿದೆ. .

ಒಂದೇ ದಿನ 3,57,295 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆ ಆಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 2,27,12,735 ರಷ್ಟಾಗಿದೆ.‌ ಚೇತರಿಕೆ ಪ್ರಮಾಣ ಶೇ. 87.25ಕ್ಕೆ ಏರಿದೆ.

ಈವರೆಗೆ ದೇಶದಲ್ಲಿ 19,18,79,503 ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ.

ಐಸಿಎಂಆರ್ ಪ್ರಕಾರ, ಈವರೆಗೆ ಒಟ್ಟು 32,44,17,870 ಕೋವಿಡ್ ಪರೀಕ್ಷೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT