ಗುರುವಾರ , ಆಗಸ್ಟ್ 18, 2022
25 °C

Covid India Update: ದೇಶದಲ್ಲಿ 15,940 ಹೊಸ ಪ್ರಕರಣ ದೃಢ

ಪ್ರಜಾವಾಣಿ ವೆಬ್ ಡೆಸ್ಕ್ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆ ಏರುಗತಿಯಲ್ಲಿದ್ದು, ಶನಿವಾರ ಬೆಳಿಗ್ಗೆ ಕೊನೆಗೊಂಡ 24 ಗಂಟೆ ಅವಧಿಯಲ್ಲಿ ಹೊಸದಾಗಿ 15,940 ಪ್ರಕರಣಗಳು ದೃಢಪಟ್ಟಿವೆ.

ಈ ಮೂಲಕ ಸತತ ಎರಡನೇ ದಿನದಲ್ಲೂ 15,000ಕ್ಕೂ ಹೆಚ್ಚು ದೈನಂದಿನ ಪ್ರಕರಣಗಳು ವರದಿಯಾಗಿವೆ.

ಹಾಗಿದ್ದರೂ ಶುಕ್ರವಾರಕ್ಕೆ ಹೋಲಿಸಿದರೆ ಅಲ್ಪ ಕಡಿಮೆಯಾಗಿದೆ. ಶುಕ್ರವಾರದಂದು17,336 ಕೊರೊನಾ ಸೋಂಕು ಪ್ರಕರಣ ವರದಿಯಾಗಿದ್ದವು.

ಈ ಅವಧಿಯಲ್ಲಿ 20 ಮಂದಿ ಸಾವಿಗೀಡಾಗಿದ್ದು, ಒಟ್ಟು 5,24,974 ಸೋಂಕಿತರು ಮೃತಪಟ್ಟಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿನ ಸಕ್ರಿಯ ಪ್ರಕರಣಗಳ ಸಂಖ್ಯೆ 91,779ಕ್ಕೆ ತಲುಪಿದೆ. ಈ ಮೂಲಕ ಸಕ್ರಿಯ ಪ್ರಕರಣಗಳಲ್ಲೂ (3,495) ಹೆಚ್ಚಳವಾಗಿದೆ.

ಕೋವಿಡ್ ದೈನಂದಿನ ದೃಢ ಪ್ರಮಾಣ ಶೇ 4.39 ಆಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು