ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ದೇಶದಲ್ಲಿ 18 ಸಾವಿರಕ್ಕೂ ಅಧಿಕ ಹೊಸ ಪ್ರಕರಣ ದಾಖಲು

Last Updated 21 ಅಕ್ಟೋಬರ್ 2021, 6:01 IST
ಅಕ್ಷರ ಗಾತ್ರ

ನವದೆಹಲಿ: ಒಂದೇ ದಿನದಲ್ಲಿ ಹೊಸದಾಗಿ 18,454 ಪ್ರಕರಣಗಳು ಪತ್ತೆಯಾಗಿದ್ದು ಕೋವಿಡ್‌ಗೆ ಒಳಗಾದವರ ಒಟ್ಟು ಸಂಖ್ಯೆ 3,41,27,450ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.

ಗುರುವಾರ ಬೆಳಿಗ್ಗೆ 8ರವರೆಗಿನ ಮಾಹಿತಿ ಪ್ರಕಾರ, ಸಕ್ರಿಯ ಪ್ರಕರಣಗಳ ಸಂಖ್ಯೆ 1,78,831ಕ್ಕೆ ಏರಿಕೆಯಾಗಿದೆ. ಅಲ್ಲದೆ 160 ಮಂದಿ ಕೋವಿಡ್‌ನಿಂದ ಸಾವನ್ನಪ್ಪಿದ್ದು ಈ ಮೂಲಕ ಸೋಂಕಿನಿಂದ ಮೃತರಾದವರ ಸಂಖ್ಯೆ 4,52,811ಕ್ಕೆ ತಲುಪಿದೆ.

ಕಳೆದ 27 ದಿನಗಳಿಂದ ದೈನಂದಿನ ಕೋವಿಡ್‌ ಪ್ರಕರಣಗಳ ಸಂಖ್ಯೆ 30 ಸಾವಿರಕ್ಕಿಂತ ಕಡಿಮೆ ಇದೆ. ಸೋಂಕಿನ ಏರಿಕೆಯ ಪ್ರಮಾಣ ಶೇ 0.52ರಷ್ಟಿದ್ದು ಚೇತರಿಕೆ ಪ್ರಮಾಣ ಶೇ 98.15ರಷ್ಟಿದೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ.

ಬುಧವಾರ 12,47,506 ಪರೀಕ್ಷೆಗಳನ್ನು ನಡೆಸಲಾಗಿದ್ದು, ದೇಶದಲ್ಲಿ ಕೋವಿಡ್ ಪತ್ತೆಗಾಗಿ ನಡೆಸಿದ ಒಟ್ಟು ಪರೀಕ್ಷೆಗಳ ಸಂಖ್ಯೆ 59,57,42,218ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT