ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಂಘೈ ಸಹಕಾರ ಸಂಸ್ಥೆಯ ಸಭೆಗೆ ಪಾಕ್‌, ಚೀನಾಗೆ ಆಹ್ವಾನ ನೀಡಿದ ಭಾರತ

ಮೇ ತಿಂಗಳಿನಲ್ಲಿ ಗೋವಾದಲ್ಲಿ ನಡೆಯಲಿರುವ ಸಭೆ
Last Updated 26 ಜನವರಿ 2023, 6:11 IST
ಅಕ್ಷರ ಗಾತ್ರ

ನವದೆಹಲಿ: ಮೇ ತಿಂಗಳಿನಲ್ಲಿ ಗೋವಾದಲ್ಲಿ ನಡೆಯಲಿರುವ ಶಾಂಘೈ ಸಹಕಾರ ಸಂಸ್ಥೆಯ ಉನ್ನತ ಮಟ್ಟದ ಸಭೆಗೆ ಭಾರತವು ಪಾಕಿಸ್ತಾನ ಹಾಗೂ ಚೀನಾಗೆ ಆಹ್ವಾನ ನೀಡಿದೆ.

ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್‌ ಭುಟ್ಟೋ ಜರ್ದಾರಿ ಹಾಗೂ ಚೀನಾದ ವಿದೇಶಾಂಗ ಮಂತ್ರಿ ಕ್ವಿನ್‌ ಗ್ಯಾಂಗ್‌ ಅವರನ್ನು ಭಾರತ ಅಹ್ವಾನಿಸಿದೆ.

ಶಾಂಘೈ ಸಹಕಾರ ಸಂಸ್ಥೆಯು 8 ರಾಷ್ಟ್ರಗಳ ಒಕ್ಕೂಟವಾಗಿದ್ದು, ಈ ಬಾರಿ ಭಾರತಕ್ಕೆ ಅಧ್ಯಕ್ಷತೆ ಲಭಿಸಿದೆ. ಮೇ ತಿಂಗಳ ಮೊದಲ ವಾರದಲ್ಲಿ ಈ ಸಭೆ ನಡೆಯಲಿದೆ.

ಇನ್ನು ಈ ಸಭೆಯಲ್ಲಿ ಭಾಗಿಯಾಗುವುದರ ಬಗ್ಗೆ ಪಾಕಿಸ್ತಾನದಿಂದ ಯಾವುದೇ ಉತ್ತರ ಬಂದಿಲ್ಲ. ಸಂಸ್ಥೆಯ ರೀತಿ ರಿವಾಜುಗಳಿಗೆ ಅನುಗುಣವಾಗಿ ಆಹ್ವಾನ ನೀಡಲಾಗಿದೆ.

ಒಂದು ವೇಳೆ ಬಿಲಾವಲ್ ಅವರು ಈ ಸಭೆಗೆ ಬಂದಿದ್ದೇ ಆದಲ್ಲಿ, 2011ರ ಬಳಿಕ ಭಾರತಕ್ಕೆ ಭೇಟಿ ನೀಡಿದ ಪಾಕಿಸ್ತಾನದ ಮೊದಲ ವಿದೇಶಾಂಗ ಮಂತ್ರಿ ಎನಿಸಿಕೊಳ್ಳಲಿದ್ದಾರೆ.

ಮಾರ್ಚ್‌ನಲ್ಲಿ ಈ ರಾಷ್ಟ್ರಗಳ ಮುಖ್ಯನ್ಯಾಯಮೂರ್ತಿಗಳ ಸಭೆಯೂ ಇದ್ದು, ಅದಕ್ಕೂ ಕೂಡ ಆಹ್ವಾನ ನೀಡಿ ಪಾಕಿಸ್ತಾನದ ಮುಖ್ಯ ನ್ಯಾಯಮೂರ್ತಿಗಳ ಕಚೇರಿಗೆ ಪತ್ರಿಕೆ ಕಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT