ಬುಧವಾರ, ಮಾರ್ಚ್ 29, 2023
32 °C
ಇಬ್ಬರಿಗೆ ಜೀವಾವಧಿ ಶಿಕ್ಷೆ ಪ್ರಕಟಿಸಿದ ಪಟ್ನಾ ವಿಶೇಷ ನ್ಯಾಯಾಲಯ

ಮೋದಿ ರ‍್ಯಾಲಿಯಲ್ಲಿ ಬಾಂಬ್ ಸ್ಫೋಟ: ನಾಲ್ವರಿಗೆ ಮರಣ ದಂಡನೆ

ಎಎಫ್‌ಪಿ Updated:

ಅಕ್ಷರ ಗಾತ್ರ : | |

Prajavani

ಪಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರು 2013ರಲ್ಲಿ ಭಾಗವಹಿಸಿದ್ದ ಚುನಾವಣಾ ರ‍್ಯಾಲಿಯಲ್ಲಿ ಬಾಂಬ್ ಸ್ಫೋಟಿಸಿದ್ದ ಪ್ರಕರಣದಲ್ಲಿ ನಾಲ್ವರಿಗೆ ಪಟ್ನಾದ ವಿಶೇಷ ಎನ್ಐಎ ನ್ಯಾಯಾಲಯವು ಸೋಮವಾರ ಮರಣದಂಡನೆ ವಿಧಿಸಿದೆ.

ಸ್ಫೋಟ ಪ್ರಕರಣದಲ್ಲಿ ಮಾರಣಾಂತಿಕ ದಾಳಿ ನಡೆಸಿದ್ದ ಇಬ್ಬರಿಗೆ ಜೀವಾವಧಿ ಶಿಕ್ಷೆಯನ್ನು ಪ್ರಕಟಿಸಲಾಗಿದೆ.

ಮೋದಿ ಅವರು ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ನೆರೆದಿದ್ದ ಬೃಹತ್ ಜನಸಮೂಹವನ್ನು ಉದ್ದೇಶಿಸಿ ಮಾತನಾಡುವ ಮುನ್ನ, ಪಟ್ನಾದ ಉದ್ಯಾನವೊಂದರಲ್ಲಿ ಸರಣಿ ಸ್ಫೋಟಗಳು ಸಂಭವಿಸಿದ್ದವು.

ಸಮೀಪದ ರೈಲ್ವೆ ನಿಲ್ದಾಣವನ್ನು ಗುರಿಯಾಗಿಸಿಕೊಂಡಿದ್ದ ಈ ಬಾಂಬ್ ದಾಳಿಯಲ್ಲಿ ಒಟ್ಟು ಆರು ಜನರು ಸಾವಿಗೀಡಾಗಿ, ನೂರಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದರು.

ಅಪರಾಧಿಗಳೆಲ್ಲರೂ ನಿಷೇಧಿತ ಸ್ಟೂಡೆಂಟ್ಸ್ ಇಸ್ಲಾಮಿಕ್ ಮೂವ್‌ಮೆಂಟ್ಸ್ ಆಫ್ ಇಂಡಿಯಾ ಗುಂಪಿಗೆ ಸೇರಿದವರು ಎಂದು ಎಂದು ರಾಷ್ಟ್ರೀಯ ತನಿಖಾ ದಳವು ತಿಳಿಸಿದೆ.

‘ಸರ್ಕಾರದ ವಿರುದ್ಧ ದಾಳಿ ನಡೆಸಲು ಹಾಗೂ ಪಿತೂರಿ ನಡೆಸಿದ್ದ ಕಾರಣಕ್ಕಾಗಿ ಅಪರಾಧಿಗಳಿಗೆ ಶಿಕ್ಷೆಯಾಗಿದೆ’ ಎಂದು ಸಾರ್ವಜನಿಕ ಅಭಿಯೋಜಕ ಲಲನ್ ಕುಮಾರ್ ಸಿನ್ಹಾ ಎಎಫ್‌ಪಿಗೆ ತಿಳಿಸಿದ್ದಾರೆ.

‘ಬಾಂಬ್ ಸ್ಫೋಟದಲ್ಲಿ ಭಾಗಿಯಾಗಿದ್ದ ಇತರ ಮೂವರಿಗೆ ನ್ಯಾಯಾಲಯವು 7 ರಿಂದ 10 ವರ್ಷಗಳವರೆಗೆ ಜೈಲುಶಿಕ್ಷೆ ವಿಧಿಸಿದೆ. ಈ ಬಗ್ಗೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗುವುದು’ ಎಂದು ಆರೋಪಿಗಳ ಪರ ವಕೀಲರು ಹೇಳಿದ್ದಾರೆ.

‘ಪ್ರಕರಣದ ಮುಖ್ಯ ಸಂಚುಕೋರನನ್ನು ಗುರುತಿಸುವಲ್ಲಿ ಎನ್‌ಐಎ ವಿಫಲವಾಗಿದೆ. ಶಿಕ್ಷೆಗೆ ಒಳಗಾದವರು ಭಯೋತ್ಪಾದಕರಲ್ಲ. ಅವರು ಯಾವುದೇ ಕ್ರಿಮಿನಲ್ ದಾಖಲೆಯನ್ನೂ ಹೊಂದಿಲ್ಲ’ ಎಂದು ವಕೀಲ ಸೈಯದ್ ಇಮ್ರಾನ್ ಘನಿ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು