ವಿಶ್ವಸಂಸ್ಥೆ: ಭಾರತವು ಆಗಸ್ಟ್ 1ರಿಂದ ಒಂದು ತಿಂಗಳ ಅವಧಿಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸಲಿದೆ.

‘ಭಾರತ 75ನೇ ಸ್ವಾತಂತ್ರ್ಯೋತ್ಸವ ಆಚರಿಸುವ ತಿಂಗಳಲ್ಲೇ ಭದ್ರತಾ ಮಂಡಳಿಯ ಅಧ್ಯಕ್ಷತೆ ವಹಿಸಲು ಅವಕಾಶ ಸಿಕ್ಕಿದೆ. ಇದು ನಿಜಕ್ಕೂ ಗೌರವದ ವಿಷಯ’ ಎಂದು ವಿಶ್ವಸಂಸ್ಥೆಯಲ್ಲಿನ ಭಾರತದ ರಾಯಭಾರಿ ಟಿ.ಎಸ್.ತಿರುಮೂರ್ತಿ ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.

‘ಈ ಒಂದು ತಿಂಗಳ ಅವಧಿಯಲ್ಲಿ ಮೂರು ಪ್ರಮುಖ ವಿಷಯಗಳಾದ ಕಡಲ ಭದ್ರತೆ, ಶಾಂತಿ ಪಾಲನೆ ಮತ್ತು ಭಯೋತ್ಪಾದನೆ ನಿಗ್ರಹಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳನ್ನು ಆಯೋಜಿಸಲು ಭಾರತ ಈಗಾಗಲೇ ಸಿದ್ಧತೆ ನಡೆಸಿದೆ’ ಎಂದು ತಿರುಮೂರ್ತಿ ಅವರು ತಿಳಿಸಿದ್ದಾರೆ.

ಭಾರತದ, ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಶಾಶ್ವತವಲ್ಲದ ಸದಸ್ಯತ್ವ ಎರಡು ವರ್ಷಗಳ ಅಧಿಕಾರಾವಧಿಯು 2021ರ ಜನವರಿ 1ರಂದು ಆರಂಭವಾಯಿತು. 2021–22ರ ಅವಧಿಯಲ್ಲಿ ಭಾರತವು ಮೊದಲ ಬಾರಿ ಆಗಸ್ಟ್ ತಿಂಗಳಲ್ಲಿ ಭದ್ರತಾ ಮಂಡಳಿಯ ಅಧ್ಯಕ್ಷತೆಯನ್ನು ವಹಿಸಲಿದೆ. ಮುಂದಿನ ವರ್ಷ ಡಿಸೆಂಬರ್‌ನಲ್ಲಿ ಮತ್ತೆ ಭದ್ರತಾ ಮಂಡಳಿಯ ಅಧ್ಯಕ್ಷ ಸ್ಥಾನ ಭಾರತಕ್ಕೆ ಸಿಗಲಿದೆ.

‘ಆಗಸ್ಟ್ 2ರಂದು ಟಿ.ಎಸ್ ತಿರುಮೂರ್ತಿ ಅವರು ಒಂದು ತಿಂಗಳ ಅವಧಿಗೆ ಮಂಡಳಿ ಕೈಗೊಳ್ಳಲಿರುವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ’ ಎಂದು ವಿಶ್ವಸಂಸ್ಥೆ ಪ್ರಕಟಣೆ ಬಿಡುಗಡೆ ಮಾಡಿದೆ.

ಕೋವಿಡ್ – ಚಿಕನ್ ಫಾಕ್ಸ್ನಂತೆ ವೇಗವಾಗಿ ಹರಡುತ್ತದೆ ಡೆಲ್ಟಾ ರೂಪಾಂತರ: ಅಮೆರಿಕ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.