ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಾಲ್ಕು ತಿಂಗಳಿನಿಂದ ಕೋವಿಡ್‌ ಪ್ರಕರಣಗಳಲ್ಲಿ ಇಳಿಕೆ: ಕೇಂದ್ರ ಸರ್ಕಾರ

Last Updated 2 ಫೆಬ್ರುವರಿ 2021, 8:50 IST
ಅಕ್ಷರ ಗಾತ್ರ

ನವದೆಹಲಿ: ಕಳೆದ ನಾಲ್ಕು ತಿಂಗಳುಗಳಿಂದ ದೇಶದಲ್ಲಿ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆ ಕಂಡುಬಂದಿದೆ. ಇದೇ ಸ್ಥಾನದಲ್ಲಿರುವ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದ ಪ್ರತಿ ಹತ್ತು ಲಕ್ಷ ಜನಸಂಖ್ಯೆಗೆ ಅನುಗುಣವಾಗಿ ವರದಿಯಾಗಿರುವ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ಅತಿ ಕಡಿಮೆಯಾಗಿದೆ ಎಂದು ರಾಜ್ಯಸಭೆಗೆ ಕೇಂದ್ರ ಸರ್ಕಾರ ಮಂಗಳವಾರ ತಿಳಿಸಿದೆ.

ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಕೇಂದ್ರದ ಆರೋಗ್ಯ ಖಾತೆ ರಾಜ್ಯ ಸಚಿವ ಅಶ್ವಿನಿ ಚೌಬೆ ಅವರು,‘ದೇಶದಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗುತ್ತಿದೆ. ದೇಶದ ಚೇತರಿಕೆ ಪ್ರಮಾಣವು ಶೇಕಡ 96.94 ರಷ್ಟಿದೆ. ಸಾವಿನ ‍ಪ್ರಮಾಣವು ಶೇಕಡಾ 1.44 ರಷ್ಟಿದೆ. ಇತರ ದೇಶಗಳಿಗೆ ಹೋಲಿಸಿದರೆ ಭಾರತದ ಜನಸಂಖ್ಯೆಗೆ ಅನುಗುಣವಾಗಿ ದೇಶದಲ್ಲಿ ವರದಿಯಾಗಿರುವ ಪ್ರಕರಣಗಳು ಮತ್ತು ಸಾವಿನ ಸಂಖ್ಯೆ ಅತಿ ಕಡಿಮೆಯಾಗಿದೆ’ ಎಂದರು.

‘ಸೋಂಕನ್ನು ನಿಯಂತ್ರಿಸಲು ಸರ್ಕಾರವು ಕೋವಿಡ್ ಪರೀಕ್ಷೆ, ಸೋಂಕಿನ ಸಂಪರ್ಕ ಪತ್ತೆ ಹಚ್ಚುವಿಕೆ, ಪ್ರತ್ಯೇಕವಾಸ ಮತ್ತು ಕಂಟೈನ್‌ಮೆಂಟ್‌ ವಿಧಾನಗಳನ್ನು ಅನುಸರಿಸುತ್ತಿದೆ. ಈ ವಿಧಾನವನ್ನು ವಿಶ್ವ ಆರೋಗ್ಯ ಸಂಸ್ಥೆಯು ಜಾಗತಿಕವಾಗಿ ಶಿಫಾರಸು ಮಾಡಿದೆ’ ಎಂದು ಅವರು ಲಿಖಿತ ರೂಪದಲ್ಲಿ ಉತ್ತರ ನೀಡಿದರು.

‘ಈ ಕಾರ್ಯತಂತ್ರಗಳಲ್ಲಿ ದೈಹಿಕ ಅಂತರ, ಸ್ಯಾನಿಟೈಸರ್ ಬಳಕೆ, ಸಾರ್ವಜನಿಕ ಸ್ಥಳ, ಶಾಲೆ, ಕೆಲಸದ ಸ್ಥಳಗಳಲ್ಲಿ ಮುಖಗವಸು ಧರಿಸುವ ವಿಧಾನಗಳು ಸೇರಿವೆ. ವೈಜ್ಞಾನಿಕ ಪುರಾವೆಗಳ ಆಧಾರದ ಮೇಲೆ ಸರ್ಕಾರವು ನಿಯಮಿತವಾಗಿ ಮಾರ್ಗಸೂಚಿ ಮತ್ತು ಕಾರ್ಯವಿಧಾನಗಳನ್ನು ಬಿಡುಗಡೆ ಮಾಡುತ್ತಿದೆ’ ಎಂದು ಚೌಬೆ ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT