ದಕ್ಷಿಣ ಆಫ್ರಿಕಾದಿಂದ 12 ಚೀತಾ ಭಾರತಕ್ಕೆ

ನವದೆಹಲಿ: ದಕ್ಷಿಣ ಆಫ್ರಿಕಾದಿಂದ ಭಾರತಕ್ಕೆ 12 ಚೀತಾಗಳನ್ನು ಕರೆ ತರುವ ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಕೇಂದ್ರ ಪರಿಸರ ಸಚಿವಾಲಯದ ಅಧಿಕಾರಿ ತಿಳಿಸಿದ್ದಾರೆ.
ಫೆಬ್ರುವರಿ 12ರ ಮುಂಚಿತವಾಗಿ ಏಳು ಗಂಡು ಮತ್ತು ಐದು ಹೆಣ್ಣು ಚೀತಾಗಳನ್ನು ಮಧ್ಯ ಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ಕರೆ ತರುವ ನಿರೀಕ್ಷೆಯಿದೆ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ: ರಾಷ್ಟ್ರ ರಾಜಧಾನಿಯಲ್ಲಿ 74ನೇ ಗಣರಾಜ್ಯೋತ್ಸವ| ಕರ್ತವ್ಯಪಥ: ನಾರಿಶಕ್ತಿ ವೈಭವ
ಕಳೆದ ಆರು ತಿಂಗಳಿಗೂ ಹೆಚ್ಚು ಸಮಯದಿಂದ ಕ್ವಾರಂಟೈನ್‌ನಲ್ಲಿರುವ ಚೀತಾಗಳು, ಇದೇ ತಿಂಗಳಲ್ಲಿ ಭಾರತಕ್ಕೆ ತಲುಪುವ ನಿರೀಕ್ಷೆಯನ್ನಿಟ್ಟುಕೊಳ್ಳಲಾಗಿತ್ತು. ಆದರೆ ದಕ್ಷಿಣ ಆಫ್ರಿಕಾದಲ್ಲಿ ಪ್ರಕ್ರಿಯೆ ವಿಳಂಬಗೊಂಡಿದ್ದರಿಂದ ಹಸ್ತಾಂತರ ವಿಳಂಬಗೊಂಡಿತು ಎಂದು ಹೇಳಿದ್ದಾರೆ.
ಕಳೆದ ವರ್ಷ (ಸೆ.17) ಮಧ್ಯ ಪ್ರದೇಶದ ಕುನೊ ರಾಷ್ಟ್ರೀಯ ಉದ್ಯಾನಕ್ಕೆ ನಮೀಬಿಯಾದಿಂದ ಎಂಟು ಚೀತಾಗಳನ್ನು ಕರೆತರಲಾಗಿತ್ತು.
ಚೀತಾವನ್ನು ಭಾರತದ ಅರಣ್ಯಕ್ಕೆ ಮರುಪರಿಚಯಿಸುವ ಉದ್ದೇಶದೊಂದಿಗೆ ಆಫ್ರಿಕಾದಿಂದ ಚೀತಾಗಳನ್ನು ಹಂತ ಹಂತವಾಗಿ ಕರೆ ತರಲಾಗುತ್ತಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.