ಬುಧವಾರ, ಡಿಸೆಂಬರ್ 8, 2021
23 °C

5,000 ಕಿ.ಮೀ ಗುರಿ ಭೇದಿಸುವ 'ಅಗ್ನಿ –5" ಕ್ಷಿಪಣಿ ಯಶಸ್ವಿ ಪರೀಕ್ಷೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಭಾರತೀಯ ಸೇನೆಗೆ ಮತ್ತಷ್ಟು ಬಲ ನೀಡುವ ಬ್ಯಾಲಿಸ್ಟಿಕ್ ಕ್ಷಿಪಣಿ ಅಗ್ನಿ-5 ಅನ್ನು ಬುಧವಾರ ಯಶಸ್ವಿಯಾಗಿ ಪರೀಕ್ಷೆ ನಡೆಸಲಾಗಿದೆ.

ಈ ಕ್ಷಿಪಣಿಯು ಅತ್ಯಂತ ನಿಖರತೆಯೊಂದಿಗೆ 5,000 ಕಿ.ಮೀ ವ್ಯಾಪ್ತಿಯ ಗುರಿಗಳನ್ನು ಹೊಡೆಯಬಲ್ಲದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಿಂದ ರಾತ್ರಿ 7:50 ರ ಸುಮಾರಿಗೆ ಪರೀಕ್ಷೆ ನಡೆಸಲಾಗಿದೆ.

ಪೂರ್ವ ಲಡಾಖ್‌ನಲ್ಲಿ ಚೀನಾದೊಂದಿಗಿನ ದೀರ್ಘಕಾಲದ ಗಡಿ ಬಿಕ್ಕಟ್ಟಿನ ಮಧ್ಯೆ ಕ್ಷಿಪಣಿಯ ಯಶಸ್ವಿ ಪರೀಕ್ಷಾರ್ಥ ಉಡಾವಣೆ ನಡೆದಿದೆ.

ಈ ಯಶಸ್ವಿ ಪ್ರಯೋಗವು ಭಾರತೀಯ ಸೇನೆಗೆ ಮತ್ತೊಂದು ಪ್ರತಿಷ್ಠೆಯ ಗರಿಯಾಗಿದೆ ಎಂದು ಸೇನೆ ಹೇಳಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು