ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಗ್ನಿ ಪ್ರೈಮ್ ತಂತ್ರಗಾರಿಕಾ ಕ್ಷಿಪಣಿಯ ಪರೀಕ್ಷಾರ್ಥ ಪ್ರಯೋಗ ಯಶಸ್ವಿ

Last Updated 18 ಡಿಸೆಂಬರ್ 2021, 8:23 IST
ಅಕ್ಷರ ಗಾತ್ರ

ಬಾಲಸೊರ್ (ಒಡಿಶಾ): ಭಾರತ ಶನಿವಾರ ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ ಪ್ರೈಮ್ ತಂತ್ರಗಾರಿಕಾ ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿ ನಡೆಸಿದೆ.

ಸುಮಾರು ಎರಡು ಸಾವಿರ ಕಿ.ಮೀ. ದೂರ ಕ್ರಮಿಸುವ ಸಾಮರ್ಥ್ಯವನ್ನು ಹೊಂದಿರುವ ಈ ಕ್ಷಿಪಣಿಯನ್ನು ಒಡಿಶಾ ಕರಾವಳಿ ತೀರದಲ್ಲಿರುವ ಬಾಲಸೊರ್ ಕೇಂದ್ರದಿಂದ ಯಶಸ್ವಿಯಾಗಿ ಪರೀಕ್ಷಿಸಲಾಯಿತು ಎಂದು ಸುದ್ದಿ ಸಂಸ್ಥೆ 'ಎಎನ್‌ಐ' ವರದಿ ಮಾಡಿದೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ) ಅಭಿವೃದ್ಧಿಪಡಿಸಿರುವ ಅಣ್ವಸ್ತ್ರ ಸಾಮರ್ಥ್ಯದ ಅಗ್ನಿ ಪ್ರೈಮ್ ಕ್ಷಿಪಣಿಯು ಹಲವು ನೂತನ ವೈಶಿಷ್ಟ್ಯಗಳನ್ನು ಹೊಂದಿದ್ದು, ಹೆಚ್ಚು ನಿಖರತೆ ಕಾಪಾಡಿಕೊಂಡಿದೆ.

ಕ್ಷಿಪಣಿಯ ಈ ಹಿಂದಿನ ಪರೀಕ್ಷೆಯನ್ನು ಜೂನ್ 28ರಂದು ನಡೆಸಲಾಗಿತ್ತು. ಅಲ್ಲದೆ ಶೀಘ್ರದಲ್ಲೇ ರಕ್ಷಣಾ ಇಲಾಖೆಗೆ ಕಾರ್ಯಾಚರಣೆಗೆ ಸಿದ್ಧವಾಗಲಿದೆ ಎಂದು ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT