ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ನ ರಾಜತಾಂತ್ರಿಕರೊಬ್ಬರಿಗೆ ಸಮನ್ಸ್‌ ನೀಡಿದ ಭಾರತ

Last Updated 21 ನವೆಂಬರ್ 2020, 11:27 IST
ಅಕ್ಷರ ಗಾತ್ರ

ನವದೆಹಲಿ/ಇಸ್ಲಾಮಾಬಾದ್‌: ಜಮ್ಮು ಮತ್ತು ಕಾಶ್ಮೀರದ ಗಡಿಯಲ್ಲಿ ಈ ವಾರ ನಡೆದಿದ್ದ ಉಗ್ರರ ವಿಫಲ ದಾಳಿಗಳ ಹಿನ್ನೆಲೆಯಲ್ಲಿ ಆ ದೇಶದ ಹಿರಿಯ ರಾಜತಾಂತ್ರಿಕರೊಬ್ಬರಿಗೆ ಭಾರತವು ಶನಿವಾರ ಸಮನ್ಸ್‌ ನೀಡಿದೆ.

ಜಮ್ಮು ಮತ್ತು ಕಾಶ್ಮೀರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ನಡೆದಿದ್ದ ಗುಂಡಿನ ಚಕಮಕಿಯಲ್ಲಿ ಜೈಶ್‌ ಎ ಮೊಹಮ್ಮದ್‌ ಸಂಘಟನೆಯ ನಾಲ್ವರು ಉಗ್ರರು ಹತರಾಗಿದ್ದರು. ಇಬ್ಬರು ಪೊಲೀಸರು ಹುತಾತ್ಮರಾಗಿದ್ದರು. ಉಗ್ರರಿಂದ ದೊಡ್ಡ ಪ್ರಮಾಣದ ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿತ್ತು.

‘ಸ್ಥಳೀಯ ಚುನಾವಣೆಯ ಹಿನ್ನೆಲೆಯಲ್ಲಿ ಉಗ್ರರು ಈ ಭಾಗದಲ್ಲಿ ದೊಡ್ಡ ಪ್ರಮಾಣದ ಸ್ಫೋಟ ನಡೆಸಲು ಸಂಚು ರೂಪಿಸಿದ್ದರು‘ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ದೂರಿದ್ದರು.ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಆರೋಪವನ್ನು ತಳ್ಳಿಹಾಕಿತ್ತು.

‘ಭಾರತವನ್ನು ಗುರಿಯಾಗಿಸಿಕೊಂಡು ಭಯೋತ್ಪಾದನಾ ಚಟುವಟಿಕೆಗಳನ್ನು ನಡೆಸುವ ಉಗ್ರ ಸಂಘಟನೆಗಳಿಗೆ ಪಾಕಿಸ್ತಾನವು ನೆಲೆ ಕಲ್ಪಿಸಬಾರದು ಎಂಬುದನ್ನು ನಾವು ಮೊದಲಿನಿಂದಲೂ ಹೇಳಿಕೊಂಡು ಬಂದಿದ್ದೇವೆ. ಭಾರತದ ಗಡಿಯೊಳಗೆ ನಡೆದ ಉಗ್ರರ ದಾಳಿ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿರುವ ಪಾಕಿಸ್ತಾನದ ವಿದೇಶಾಂಗ ಕಚೇರಿಯಲ್ಲಿ ಪ್ರತಿಭಟನೆ ದಾಖಲಿಸಲಾಗಿದೆ’ ಎಂದು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಪ್ರಕಟಣೆ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT