ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾದ ಅಕ್ರಮ ನಿರ್ಮಾಣವನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ: ಬಾಗ್ಚಿ

Last Updated 11 ನವೆಂಬರ್ 2021, 16:17 IST
ಅಕ್ಷರ ಗಾತ್ರ

ನವದೆಹಲಿ: ಚೀನಾವು ನಮ್ಮ ಪ್ರದೇಶವನ್ನು ಆಕ್ರಮಿಸುವ ಅಥವಾ ಅದರ ಅಸಮರ್ಥನೀಯ ವಾದವನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ ಎಂದು ಭಾರತ ಹೇಳಿದೆ.

ಅರುಣಾಚಲ ಪ್ರದೇಶದ ಗಡಿಯಲ್ಲಿ ಚೀನಾ ಅಕ್ರಮವಾಗಿ ಹಳ್ಳಿಯೊಂದನ್ನು ನಿರ್ಮಿಸಿದೆ ಎಂದು ಅಮೆರಿಕ ರಕ್ಷಣಾ ಇಲಾಖೆ(ಪೆಂಟಗನ್)ಯು ಅಲ್ಲಿನ ಸಂಸತ್ತಿನಲ್ಲಿ ಪ್ರಸ್ತಾಪಿಸಿದ ಕೆಲ ದಿನಗಳ ಬಳಿಕ ಭಾರತದ ವಿದೇಶಾಂಗ ಇಲಾಖೆಯ ವಕ್ತಾರ ಅರಿಂದಮ್ ಬಾಗ್ಚಿ ಈ ಪ್ರತಿಕ್ರಿಯೆ ನೀಡಿದ್ದಾರೆ.

ಭಾರತವು ಸಹ ಗಡಿಯುದ್ದಕ್ಕೂ ರಸ್ತೆ ಮತ್ತು ಸೇತುವೆಗಳ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದೆ ಎಂದು ಅವರು ಹೇಳಿದ್ದಾರೆ. ಅಮೆರಿಕ ಕಾಂಗ್ರೆಸ್‌ನಲ್ಲಿ ಅಲ್ಲಿನ ರಕ್ಷಣಾ ಇಲಾಖೆ ಮಾಡಿದ ಪ್ರಸ್ತಾಪವನ್ನು ನಾವು ಗಮನದಲ್ಲಿಟ್ಟುಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶವೂ ಸೇರಿದಂತೆ ಗಡಿಯಲ್ಲಿ ಹಲವು ವರ್ಷಗಳಿಂದ ಚೀನಾ ನಿರ್ಮಾಣ ಕಾಮಗಾರಿಗಳನ್ನು ನಡೆಸುತ್ತಿದೆ. ಈ ವರ್ಷದ ಆರಂಭದಲ್ಲಿ ಮಾಧ್ಯಮಗಳಲ್ಲಿ ಈ ಬಗ್ಗೆ ಸುದ್ದಿಗಳು ಪ್ರಸಾರವಾಗಿದ್ದವು. ಚೀನಾದ ಅಕ್ರಮ ನಿರ್ಮಾಣವನ್ನು ಒಪ್ಪಿಕೊಳ್ಳುವ ಮಾತೇ ಇಲ್ಲ. ಆ ರೀತಿಯ ಚಟುವಟಿಕಗಳ ಬಗ್ಗೆ ಸರ್ಕಾರವು ರಾಜತಾಂತ್ರಿಕವಾಗಿ ಈ ಹಿಂದೆ ಪ್ರಬಲ ಪ್ರತಿಭಟನೆಯನ್ನು ವ್ಯಕ್ತಪಡಿಸಿದೆ. ಮುಂದೆಯೂ ಅದನ್ನು ಮಾಡಲಿದೆ ಎಂದು ಅವರು ಹೇಳಿದ್ದಾರೆ.

ಭಾರತವು ಗಡಿಯ ಎಲ್ಲ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದೆ. ನಮ್ಮ ಪರಮಾಧಿಕಾರ ಮತ್ತು ಪ್ರಾದೇಶಿಕ ಸಮಗ್ರತೆ ಕಾಪಾಡಲು ಬೇಕಾದ ಎಲ್ಲ ಕ್ರಮ ಕೈಗೊಳ್ಳುವುದಾಗಿ ಬಾಗ್ಚಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT