ಗುರುವಾರ , ಮೇ 26, 2022
30 °C

ಕೋವಿಡ್‌ 19ರ ಲಸಿಕೆ ನೀಡಿಕೆ: ಮೂರನೇ ಸ್ಥಾನದಲ್ಲಿ ಭಾರತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌ 19ರ ಲಸಿಕೆಯನ್ನು ಸಮರ್ಪಕವಾಗಿ ನೀಡುತ್ತಿರುವ ಭಾರತ ದೇಶ ವಿಶ್ವದಲ್ಲಿಯೇ ಮೂರನೇ ಸ್ಥಾನದಲ್ಲಿದೆ. ಅಮೆರಿಕ ಮತ್ತು ಬ್ರಿಟನ್‌ ಮೊದಲ ಎರಡು ಸ್ಥಾನಗಳಲ್ಲಿವೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಗುರುವಾರ ತಿಳಿಸಿದೆ.

ಗುರುವಾರ ಬೆಳಿಗ್ಗೆ 8 ಗಂಟೆ ವೇಳೆಗೆ ಆರೋಗ್ಯ ಕಾರ್ಯಕರ್ತರು ಮತ್ತು ಮುಂಚೂಣಿ ಕಾರ್ಮಿಕರನ್ನು ಒಳಗೊಂಡಂತೆ 94 ಲಕ್ಷಕ್ಕೂ ಹೆಚ್ಚು ಜನರಿಗೆ ಲಸಿಕೆ ನೀಡಲಾಗಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಕೋವಿಡ್‌–19 ಸೋಂಕು ಪ್ರಸರಣದ ವೇಗ ಸತತ ಏಳು ದಿನಗಳಲ್ಲಿ ಇಳಿಕೆಯ ಹಾದಿಯಲ್ಲಿದೆ ಎಂದು ಅದು ತಿಳಿಸಿದೆ.

ಕಳೆದ 24 ಗಂಟೆಗಳಲ್ಲಿ ದೆಹಲಿ, ಒಡಿಶಾ, ಜಮ್ಮು ಮತ್ತು ಕಾಶ್ಮೀರ, ಜಾರ್ಖಂಡ್, ಹಿಮಾಚಲ ಪ್ರದೇಶ, ಲಕ್ಷದೀಪ, ಮಣಿಪುರ, ಮೇಘಾಲಯ, ಸಿಕ್ಕಿಂ, ಲಡಾಖ್‌, ನಾಗಾಲ್ಯಾಂಡ್‌, ಮಿಜೋರಾಂ, ಅಂಡಮಾನ್‌ ಮತ್ತು ನಿಕೋಬಾರ್‌ ದ್ವೀಪಗಳು, ತ್ರಿಪುರಾ, ದಮನ್ ಮತ್ತು ಡಿಯು, ದಾದರ್‌ ಮತ್ತು ನಗರ್ ಹವೇಲಿ, ಅರುಣಾಚಲ ಪ್ರದೇಶದ ವ್ಯಾಪ್ತಿಯಲ್ಲಿ ಕೋವಿಡ್‌–19ರ ಕಾರಣಕ್ಕೆ ಯಾವುದೇ ಸಾವುಗಳು ಸಂಭವಿಸಿಲ್ಲ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು