ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಷ್ಯಾದಿಂದ ತೈಲ ಆಮದನ್ನು ಭಾರತ ಮುಂದುವರಿಸಲಿದೆ: ನಿರ್ಮಲಾ ಸೀತಾರಾಮನ್

Last Updated 1 ಏಪ್ರಿಲ್ 2022, 15:52 IST
ಅಕ್ಷರ ಗಾತ್ರ

ನವದೆಹಲಿ: ಜಾಗತಿಕಾಗಿ ಕಚ್ಚಾ ತೈಲದ ಬೆಲೆ ಏರಿಕೆಯಾಗಿರುವುದರಿಂದ ರಿಯಾಯಿತಿ ದರದಲ್ಲಿ ತೈಲ ಅಗತ್ಯವಿರುವುದರಿಂದ ಭಾರತವು ರಷ್ಯಾದಿಂದ ಕಚ್ಚಾ ತೈಲವನ್ನು ಖರೀದಿಸುವುದನ್ನು ಮುಂದುವರಿಸಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಶುಕ್ರವಾರ ಹೇಳಿದ್ದಾರೆ.

ಭಾರತವು ಈಗಾಗಲೇ ರಷ್ಯಾದಿಂದ ತೈಲವನ್ನು ಖರೀದಿಸಲು ಪ್ರಾರಂಭಿಸಿದೆ ಎಂದು ಸೀತಾರಾಮನ್ ಹೇಳಿದರು. ಸರಬರಾಜು ಕಡಿಮೆಯಾದ ಕಾರಣ ತೈಲ ಆಮದು ಸವಾಲಿನದಾಗಿದೆ ಎಂದು ಅವರು ಹೇಳಿದರು.

ಫೆಬ್ರುವರಿ 24ರಂದು ಉಕ್ರೇನ್‌ ಮೇಲೆ ಆಕ್ರಮಣವನ್ನು ಆರಂಭಿಸಿದ ನಂತರ ರಷ್ಯಾ ಮೇಲೆ ವಿಧಿಸಲಾದ ನಿರ್ಬಂಧಗಳನ್ನು ದುರ್ಬಲಗೊಳಿಸುವ ಮತ್ತು ಡಾಲರ್ ಆಧಾರಿತ ಹಣಕಾಸು ವ್ಯವಸ್ಥೆಯನ್ನು ಬುಡಮೇಲು ಮಾಡುವುದನ್ನು ತಪ್ಪಿಸುವಂತೆ ಅಮೆರಿಕ ಮತ್ತು ಬ್ರಿಟಿಷ್ ಅಧಿಕಾರಿಗಳು ಭಾರತವನ್ನು ಒತ್ತಾಯಿಸಿದ್ದವು. ಇದಾದ ಬಳಿಕ, ಭಾರತದ ಬೆಂಬಲವನ್ನು ಪಡೆಯಲು ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ನವದೆಹಲಿಗೆ ಭೇಟಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT