ಗುರುವಾರ , ಮೇ 19, 2022
25 °C

ಮುಂದಿನ 10 ವರ್ಷದಲ್ಲಿ ಭಾರತ ದಾಖಲೆ ಸಂಖ್ಯೆಯಲ್ಲಿ ವೈದ್ಯರನ್ನು ಹೊಂದಲಿದೆ: ಮೋದಿ

ಪಿಟಿಐ Updated:

ಅಕ್ಷರ ಗಾತ್ರ : | |

ಅಹಮದಾಬಾದ್: ಮುಂದಿನ 10 ವರ್ಷಗಳಲ್ಲಿ ಭಾರತ ದಾಖಲೆ ಸಂಖ್ಯೆಯಲ್ಲಿ ವೈದ್ಯರನ್ನು ಹೊಂದಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. 

ಗುಜರಾತ್‌ನ ಭುಜ್‌ನಲ್ಲಿ 200 ಹಾಸಿಗೆಗಳ ಕೆ.ಕೆ. ಪಟೇಲ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯನ್ನು ವಿಡಿಯೊ ಕಾನ್ಫರೆನ್ಸ್‌ ಮೂಲಕ ದೇಶಕ್ಕೆ ಸಮರ್ಪಿಸಿದ ಬಳಿಕ ಮಾತನಾಡಿದ ಅವರು, ‘ಕೇಂದ್ರ ಸರ್ಕಾರ ಹೊಸ ನೀತಿಯಿಂದಾಗಿ ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ವೈದ್ಯಕೀಯ ಕಾಲೇಜು ಸ್ಥಾಪಿಸಲು ಉದ್ದೇಶಿಸಿದ್ದು, ಮುಂದಿನ 10 ವರ್ಷಗಳಲ್ಲಿ ದೇಶವು ದಾಖಲೆ ಸಂಖ್ಯೆಯ ವೈದ್ಯರನ್ನು ಪಡೆಯಲಿದೆ’ ಎಂದು ಹೇಳಿದ್ದಾರೆ. 

ಪ್ರತಿ ಜಿಲ್ಲೆಯಲ್ಲೂ ಕನಿಷ್ಠ ಒಂದು ವೈದ್ಯಕೀಯ ಕಾಲೇಜು ಹೊಂದುವ ಗುರಿಯೊಂದಿಗೆ ವೈದ್ಯಕೀಯ ಶಿಕ್ಷಣವು ಎಲ್ಲರಿಗೂ ತಲುಪುವಂತೆ ನೋಡಿಕೊಳ್ಳುವುದು ನಮ್ಮ ಮುಖ್ಯ ಉದ್ದೇಶ ಎಂದು ತಿಳಿಸಿದ್ದಾರೆ. 

ಗುಜರಾತ್ ಎರಡು ದಶಕಗಳ ಹಿಂದೆ ಒಂಬತ್ತು ವೈದ್ಯಕೀಯ ಕಾಲೇಜುಗಳನ್ನು ಹೊಂದಿತ್ತು. ಆದರೆ, ಕಳೆದ 20 ವರ್ಷಗಳಲ್ಲಿ ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆಯಾಗಿದೆ ಎಂದು ಹೇಳಿದ ಅವರು, ‘ಈಗ ರಾಜ್ಯದಲ್ಲಿ ಒಂದು ಏಮ್ಸ್ ಸೇರಿದಂತೆ 36 ವೈದ್ಯಕೀಯ ಕಾಲೇಜುಗಳಿವೆ. ಪ್ರತಿ ವರ್ಷ ಆರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರವೇಶ ಪಡೆಯುತ್ತಿದ್ದಾರೆ’ ಎಂದು ತಿಳಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು