ಭಾನುವಾರ, ಮಾರ್ಚ್ 26, 2023
21 °C

‘ಶೇ 65ರಷ್ಟು ಸ್ಥಾಪಿತ ವಿದ್ಯುತ್‌ ಉತ್ಪಾದಿಸುವ ಸಾಮರ್ಥ್ಯ ಭಾರತಕ್ಕಿದೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ‘ಭಾರತವು 2030ರ ವೇಳೆಗೆ ಪಳೆಯುಳಿಕೆ ರಹಿತ ಇಂಧನ ಮೂಲಗಳಿಂದ ಶೇ 65ರಷ್ಟು ಸ್ಥಾಪಿತ ವಿದ್ಯುತ್‌ ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ’ ಎಂದು ಕೇಂದ್ರ ಇಂಧನ ಸಚಿವ ಆರ್‌.ಕೆ.ಸಿಂಗ್‌ ತಿಳಿಸಿದ್ದಾರೆ.

ಇಲ್ಲಿ ಆಯೋಜಿಸಲಾಗಿದ್ದ ಸಮ್ಮೇಳನವೊಂದರಲ್ಲಿ ಸೋಮವಾರ ಮಾತನಾಡಿದ ಅವರು, ‘ಭಾರತವು 2030ರ ವೇಳೆಗೆ 500 ಗಿಗಾ ವ್ಯಾಟ್‌ನಷ್ಟು ನವೀಕರಿಸಬಹುದಾದ ಇಂಧನ ಉತ್ಪಾದಿಸುವ ಗುರಿ ಹೊಂದಿದೆ’ ಎಂದರು. 

‘20 ಗಿಗಾ ವ್ಯಾಟ್‌ನಷ್ಟು ಸೌರ ದ್ಯುತಿವಿದ್ಯುತ್‌ ಉತ್ಪಾದನಾ ಸಾಮರ್ಥ್ಯದ ಘಟಕಗಳನ್ನು ಈಗಾಗಲೇ ಸ್ಥಾಪಿಸಲಾಗಿದೆ. ಇನ್ನೂ 15 ರಿಂದ 20 ಗಿಗಾ ವ್ಯಾಟ್‌ ದ್ಯುತಿವಿದ್ಯುತ್‌ ಉತ್ಪಾದನಾ ಸಾಮರ್ಥ್ಯದ ಘಟಕಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ. 2025–26ರ ವೇಳೆಗೆ ದೇಶದ ಸೌರ ದ್ಯುತಿವಿದ್ಯುತ್‌ ಉತ್ಪಾದನಾ ಸಾಮರ್ಥ್ಯವು 90 ಗಿಗಾ ವ್ಯಾಟ್‌ಗೆ ತಲುಪುವ ನಿರೀಕ್ಷೆ ಇದೆ’ ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು