ಭಾನುವಾರ, ಅಕ್ಟೋಬರ್ 24, 2021
23 °C

‘ಲಸಿಕೆ ಮೈತ್ರಿ’ ಕಾರ್ಯಕ್ರಮದ ಅಡಿಯಲ್ಲಿ ಲಸಿಕೆ ರಫ್ತು ಆರಂಭಿಸಲಿದೆ ಭಾರತ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ:  'ಲಸಿಕೆ ಮೈತ್ರಿ' ಕಾರ್ಯಕ್ರಮದ ಅಡಿಯಲ್ಲಿ ಭಾರತವು ಮುಂದಿನ ತಿಂಗಳು ಹೆಚ್ಚುವರಿ ಕೋವಿಡ್ ಲಸಿಕೆಗಳ ರಫ್ತನ್ನು ಪುನರಾರಂಭಿಸಲಿದೆ. ಜಾಗತಿಕ ಲಸಿಕೆ ಹಂಚಿಕೆ ಕಾರ್ಯಕ್ರಮ ‘ಕೋವ್ಯಾಕ್ಸ್‌’ಗೆ  ಭಾರತ ಬದ್ಧತೆ ಪ್ರದರ್ಶಿಸುತ್ತಿದೆ.  ಆದರೂ ನಮ್ಮ ನಾಗರಿಕರಿಗೆ ಲಸಿಕೆ ಪೂರೈಸುವುದು ನಮ್ಮ ಅದ್ಯತೆಯಾಗಿರಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್‌ಸುಖ್‌ ಮಾಂಡವೀಯ ಸೋಮವಾರ ಹೇಳಿದರು.

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಅಕ್ಟೋಬರ್‌ನಲ್ಲಿ 30 ಕೋಟಿ ಡೋಸ್ ಮತ್ತು ಮುಂದಿನ ಮೂರು ತಿಂಗಳಲ್ಲಿ 100 ಕೋಟಿ ಡೋಸ್‌ಗಳು ನಮಗೆ ಲಭ್ಯವಾಗಲಿವೆ,‘ ಎಂದು ಅವರು ತಿಳಿಸಿದರು. 

ದೇಶಾದ್ಯಂತ ಇದುವರೆಗೆ 81 ಕೋಟಿ ಡೋಸ್‌ಗಳನ್ನು ನೀಡಲಾಗಿದೆ. ಕೊನೆಯ 10 ಕೋಟಿ ಡೋಸ್‌ಗಳನ್ನು ಕೇವಲ 11 ದಿನಗಳಲ್ಲಿ ನೀಡಲಾಗಿದೆ ಎಂದು ಅವರು ಹೇಳಿದರು.

ನಮ್ಮ ಪ್ರಜೆಗಳಿಗೆ ಲಸಿಕೆ ನೀಡುವುದು ಸರ್ಕಾರದ ಆದ್ಯತೆಯಾಗಿದೆ. ಮುಂದಿನ ತ್ರೈಮಾಸಿಕದಲ್ಲಿ (ಅಕ್ಟೋಬರ್-ಡಿಸೆಂಬರ್) ‘ಲಸಿಕೆ ಮೈತ್ರಿ’ ಕಾರ್ಯಕ್ರಮದ ಅಡಿಯಲ್ಲಿ ಹೆಚ್ಚುವರಿ ಲಸಿಕೆಗಳ ರಫ್ತು ಮಾಡಲಾಗುತ್ತದೆ. ಇದು ನಮ್ಮ 'ವಸುಧೈವ ಕುಟುಂಬಕಂ' ಎಂಬ ಧ್ಯೇಯ ವಾಕ್ಯಕ್ಕೆ ಅನುಗುಣವಾಗಿದೆ,’ ಎಂದು ಅವರು ಹೇಳಿದರು.

ಕೋವಿಡ್ -19 ವಿರುದ್ಧದ ಸಾಮೂಹಿಕ ಹೋರಾಟದಲ್ಲಿ ಭಾರತದ ಬದ್ಧತೆಗೆ ಲಸಿಕೆಗಳ ರಫ್ತು ಕಾರ್ಯಕ್ರಮವು ಸಾಕ್ಷಿಯಾಗಿದೆ.  

ಜಾಗತಿಕ ಲಸಿಕೆ ಹಂಚಿಕೆ ಕಾರ್ಯಕ್ರಮವಾಗಿರುವ ‘ಕೋವ್ಯಾಕ್ಸ್‌’ ಅನ್ನು ವಿಶ್ವ ಆರೋಗ್ಯ ಸಂಸ್ಥೆ ನಿರ್ವಹಿಸುತ್ತಿದೆ. 

ಭಾರತದ ಲಸಿಕೆ ಅಭಿಯಾನವು ವಿಶ್ವಕ್ಕೆ ಮಾದರಿಯಾಗಿದೆ ಮತ್ತು ಅಭಿಯಾನವು ಅತ್ಯಂತ ವೇಗದಲ್ಲಿ ನಡೆಯುತ್ತಿದೆ ಎಂದು ಅವರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು