ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.15ರಿಂದ ಅಂತರರಾಷ್ಟ್ರೀಯ ವಿಮಾನ ಸೇವೆಗಳ ಪುನರಾರಂಭ: ವಿಮಾನಯಾನ ಸಚಿವಾಲಯ

Last Updated 26 ನವೆಂಬರ್ 2021, 14:09 IST
ಅಕ್ಷರ ಗಾತ್ರ

ನವದೆಹಲಿ: ಸುಮಾರು 21 ತಿಂಗಳ ಬಳಿಕ ದೇಶದಲ್ಲಿ ಅಂತರರಾಷ್ಟ್ರೀಯ ವಿಮಾನಗಳ ಸೇವೆ ಆರಂಭವಾಗುತ್ತಿದ್ದು, ಡಿಸೆಂಬರ್‌ 15ರಿಂದ ನಿಗದಿತ ವಿಮಾನಗಳ ಹಾರಾಟ ನಡೆಯಲಿದೆ ಎಂದು ನಾಗರಿಕ ವಿಮಾನಗಳ ಸಚಿವಾಲಯ ಶುಕ್ರವಾರ ಹೇಳಿದೆ.

ಕೋವಿಡ್‌–19 ಸಾಂಕ್ರಾಮಿಕದ ಕಾರಣಗಳಿಂದಾಗಿ ಕಳೆದ ವರ್ಷ ಮಾರ್ಚ್‌ 23ರಿಂದ ಅಂತರರಾಷ್ಟ್ರೀಯ ವಿಮಾನಗಳ ಸೇವೆಗಳನ್ನು ನಿಷೇಧಿಸಲಾಗಿತ್ತು. ಆದರೆ, ಕಳೆದ ವರ್ಷ ಜುಲೈನಿಂದ ಸುಮಾರು 28 ರಾಷ್ಟ್ರಗಳೊಂದಿಗೆ ಏರ್‌ ಬಬಲ್‌ ವ್ಯವಸ್ಥೆಯೊಂದಿಗೆ ವಿಶೇಷ ಪ್ರಯಾಣಿಕ ವಿಮಾನಗಳ ಕಾರ್ಯಾಚರಣೆ ನಡೆಸಲಾಗುತ್ತಿದೆ.

'ಭಾರತದಿಂದ ಪ್ರಯಾಣಿಸುವ ಮತ್ತು ವಿದೇಶದಿಂದ ಇಲ್ಲಿಗೆ ಬರುವ ಅಂತರರಾಷ್ಟ್ರೀಯ ನಾಗರಿಕ ವಿಮಾನ ಸೇವೆಗಳನ್ನು ಪುನರಾರಂಭಿಸುವ ಕುರಿತು ವಿದೇಶಾಂಗ ವ್ಯವಹಾರಗಳ ಸಚಿವಾಲಯ, ಕೇಂದ್ರ ಗೃಹ ಸಚಿವಾಲಯ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯಗಳನ್ನು ಸಂಪರ್ಕಿಸಿ ಪರಿಶೀಲನೆಗೆ ಒಳಪಡಿಸಲಾಗಿದೆ. ನಿಗದಿತ ಅಂತರರಾಷ್ಟ್ರೀಯ ಪ್ರಯಾಣಿಕ ವಿಮಾನಗಳನ್ನು 2021ರ ಡಿಸೆಂಬರ್‌ 15ರಿಂದ ಪುನರಾರಂಭಿಸಲಾಗುತ್ತದೆ' ಎಂದು ನಾಗರಿಕ ವಿಮಾನಯಾನ ಸಚಿವಾಲಯವು ಆದೇಶ ಹೊರಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT