ಶನಿವಾರ, ಏಪ್ರಿಲ್ 17, 2021
23 °C

ಕೋವಿಡ್ ಲಸಿಕೆ ಅಡ್ಡಪರಿಣಾಮಗಳನ್ನು ಪರಿಶೀಲಿಸಲಿದೆ ಭಾರತ

ರಾಯಿಟರ್ಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೋವಿಡ್–19 ವಿರುದ್ಧದ ಲಸಿಕೆಗಳ ಅಡ್ಡಪರಿಣಾಮಗಳನ್ನು ಭಾರತದ ತಜ್ಞರ ತಂಡ ಪರಿಶೀಲನೆ ನಡೆಸಲಿದೆ.

ದೇಶದಲ್ಲಿ ಕೋವಿಡ್ ಲಸಿಕೆ ಪಡೆದುಕೊಂಡವರಲ್ಲಿ ರಕ್ತ ಹೆಪ್ಪುಗಟ್ಟುವಿಕೆ, ಸಣ್ಣ ಪ್ರಮಾಣದ ಅಡ್ಡಪರಿಣಾಮಗಳು ಕಾಣಿಸಿಕೊಂಡಿವೆಯೇ ಎಂಬುದನ್ನು ತಂಡ ಪರಿಶೀಲಿಸಲಿದೆ ಎಂದು ‘ಫೈನಾನ್ಶಿಯಲ್ ಡೈಲಿ ಮಿಂಟ್’ ವರದಿ ಮಾಡಿದೆ.

ಭಾರತದಲ್ಲಿ ಸದ್ಯ ಆಸ್ಟ್ರಾಜೆನೆಕಾ ಮತ್ತು ಭಾರತ್‌ ಬಯೋಟೆಕ್‌ ಅಭಿವೃದ್ಧಿಪಡಿಸಿರುವ ಲಸಿಕೆಗಳನ್ನು ನೀಡಲಾಗುತ್ತಿದೆ.

ಓದಿ: 

ಯುರೋಪ್‌ನ ಹಲವು ರಾಷ್ಟ್ರಗಳು ಆಸ್ಟ್ರಾಜೆನೆಕಾದ ಲಸಿಕೆಯನ್ನು ಯುವಕರಿಗೆ ನೀಡುವುದಕ್ಕೆ ನಿರ್ಬಂಧ ವಿಧಿಸಿವೆ. ರಕ್ತಹೆಪ್ಪುಗಟ್ಟುವಿಕೆಯ ಅತಿ ವಿರಳ ಪ್ರಕರಣಗಳು ಕಾಣಿಸಿಕೊಂಡ ಬಳಿಕ ಆ ದೇಶಗಳು ನಿರ್ಬಂಧ ವಿಧಿಸಿವೆ. ಲಸಿಕೆ ಪಡೆದುಕೊಂಡ ಎರಡು ವಾರಗಳ ಬಳಿಕ 60 ವರ್ಷಕ್ಕಿಂತ ಕಡಿಮೆ ವಯಸ್ಸಿನ ಕೆಲವೇ ಕೆಲವು ಮಹಿಳೆಯರಲ್ಲಿ ಅಡ್ಡಪರಿಣಾಮ ಉಂಟಾಗಿತ್ತು.

ಈ ಮಧ್ಯೆ, ಕೋವಿಡ್ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕಾರಣ ಮುಖ್ಯಮಂತ್ರಿಗಳ ಜತೆ ಗುರುವಾರ ಸಭೆ ನಡೆಸಿದ್ದ ಪ್ರಧಾನಿ ನರೇಂದ್ರ ಮೋದಿ, ಏಪ್ರಿಲ್‌ 11ರಿಂದ 14ರ ವರೆಗೂ 'ಲಸಿಕೆ ಉತ್ಸವ' ನಡೆಸುವಂತೆ ಕರೆ ನೀಡಿದ್ದಾರೆ.

ಓದಿ: 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು