ಇಂಗಾಲ ಹೊರಸೂಸುವಿಕೆ: ಗುರಿ ಮೀರಿ ಕಡಿಮೆಗೊಳಿಸಲು ಭಾರತ ಬದ್ಧ– ಸಚಿವ ಸಿಂಗ್

ನವದೆಹಲಿ: ಹವಾಮಾನ ಬದಲಾವಣೆಗೆ ಸಂಬಂಧಿಸಿದ ಪ್ಯಾರಿಸ್ ಒಪ್ಪಂದದಂತೆ, ಭಾರತವು ಇಂಗಾಲದ ಹೊರಸೂಸುವಿಕೆ ಪ್ರಮಾಣವನ್ನು ನಿಗದಿತ ಗುರಿಯನ್ನು ಮೀರಿ ಕಡಿಮೆಗೊಳಿಸಲಿದೆ ಎಂದು ಕೇಂದ್ರ ಇಂಧನ ಸಚಿವ ಆರ್.ಕೆ.ಸಿಂಗ್ ವಿಶ್ವಾಸ ವ್ಯಕ್ತಪಡಿಸಿದರು.
ಸಿಐಐ ಗುರುವಾರ ಆಯೋಜಿಸಿದ್ದ ‘ಆತ್ಮನಿರ್ಭರ ಭಾರತ: ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ ಸ್ವಾವಲಂಬನೆ’ ಎಂಬ ವಿಷಯ ಕುರಿತ ಸಮಾವೇಶದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಪ್ಯಾರಿಸ್ ಒಪ್ಪಂದದ ಪ್ರಕಾರ 2030ರ ವೇಳೆಗೆ ಇಂಗಾಲದ ಹೊರಸೂಸುವಿಕೆ ಪ್ರಮಾಣವನ್ನು ಭಾರತ ಶೇ 33ಕ್ಕೆ ಇಳಿಸಬೇಕಾಗಿದೆ. ಈ ಗುರಿಯನ್ನು ಮೀರಿ ಹೊರಸೂಸುವಿಕೆ ಪ್ರಮಾಣವನ್ನು ಕಡಿಮೆಗೊಳಿಸಲು ಭಾರತ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ’ ಎಂದು ಅವರು ಹೇಳಿದರು.
‘2030ರ ವೇಳೆಗೆ ಭಾರತ ತನ್ನ ಒಟ್ಟು ಸಾಮರ್ಥ್ಯದ ಶೇ 40ರಷ್ಟು ಇಂಧನವನ್ನು ಪಳಿಯುಳಿಕೆಯೇತರ ಮೂಲಗಳಿಂದ ಉತ್ಪಾದಿಸಬೇಕು ಎಂಬುದನ್ನು ಸಹ ಪ್ಯಾರಿಸ್ ಒಪ್ಪಂದದಲ್ಲಿ ಹೇಳಲಾಗಿದೆ’ ಎಂದು ಸಚಿವ ಸಿಂಗ್ ಹೇಳಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.