ಶುಕ್ರವಾರ, ಸೆಪ್ಟೆಂಬರ್ 24, 2021
21 °C

ಹಿಂದಿನಂತೆಯೇ ಅಫ್ಗನ್ನರ ಪರ ಭಾರತದ ನಿಲುವು: ಜೈಶಂಕರ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ‘ಅಫ್ಗಾನಿಸ್ತಾನವು ಗಂಭೀರವಾದ ಮಾನವೀಯ ಬಿಕ್ಕಟ್ಟನ್ನು ಎದುರಿಸುತ್ತಿರುವಾಗ, ಭಾರತವು ಹಿಂದಿನಂತೆಯೇ ಅಘ್ಗನ್ನರ ಪರವಾಗಿ ನಿಲ್ಲಲಿದೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಸೋಮವಾರ ಹೇಳಿದ್ದಾರೆ.

ವಿಶ್ವಸಂಸ್ಥೆಯ ಉನ್ನತಮಟ್ಟದ ವರ್ಚುವಲ್ ಸಭೆಯಲ್ಲಿ ಮಾತನಾಡಿದ ಅವರು,‘ಯುದ್ಧದಿಂದ ಹಾನಿಗೊಳಗಾದ ಅಫ್ಗಾನಿಸ್ತಾನದ ಭವಿಷ್ಯದಲ್ಲಿ ಜಾಗತಿಕ ಮಟ್ಟದಲ್ಲಿ ಭಾರತವು ಪ್ರಧಾನ ಪಾತ್ರ ವಹಿಸಲಿದೆ’ ಎಂದರು.

‘ನೆರೆಯ ರಾಷ್ಟ್ರವಾಗಿ ಭಾರತವು ಅಲ್ಲಿನ ಬೆಳವಣಿಗೆಗಳನ್ನು ಗಮನಿಸುತ್ತಿದೆ. ಅಫ್ಗಾನಿಸ್ತಾನಕ್ಕೆ ಸಹಾಯ ಮಾಡಲು ಸಾಧ್ಯವಾದಷ್ಟು ಉತ್ತಮವಾದ ವಾತಾವರಣವನ್ನು ಸೃಷ್ಟಿಸಲು ಅಂತರರಾಷ್ಟ್ರೀಯ ಸಮುದಾಯವು ಒಗ್ಗೂಡಬೇಕು’ ಎಂದೂ ಜೈಶಂಕರ್ ಕರೆ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು