ಗುರುವಾರ, 8 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತಕ್ಕೆ ಬೆಂಬಲ: ಅಮೆರಿಕದಲ್ಲಿ ನೆಲೆಸಿರುವ ಭಾರತೀಯರಿಂದ ರ‍್ಯಾಲಿ

Last Updated 25 ಮಾರ್ಚ್ 2023, 13:22 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಖಾಲಿಸ್ತಾನ ಪರ ಬೆಂಬಲಿಗರು ಸ್ಯಾನ್‌ ಫ್ರಾನ್ಸಿಸ್ಕೊದಲ್ಲಿರುವ ಭಾರತದ ಕಾನ್ಸುಲೇಟ್‌ ಕಚೇರಿ ಮೇಲೆ ದಾಳಿ ನಡೆಸಿರುವುದನ್ನು ಖಂಡಿಸಿ ಅಮೆರಿಕದಲ್ಲಿ ನೆಲೆಸಿರುವ ಭಾರತೀಯರು ಕಾನ್ಸುಲೇಟ್‌ ಕಚೇರಿ ಎದುರು ಶುಕ್ರವಾರ ಶಾಂತಿಯುತ ರ‍್ಯಾಲಿ ನಡೆಸಿದ್ದಾರೆ.

ರ‍್ಯಾಲಿಯಲ್ಲಿ ಪಾಲ್ಗೊಂಡಿದ್ದವರು ತ್ರಿವರ್ಣ ಧ್ವಜಗಳನ್ನು ಹಿಡಿದು, ‘ನಾವು ಭಾರತಕ್ಕೆ ಬೆಂಬಲವಾಗಿ ನಿಲ್ಲಲಿದ್ದೇವೆ’ ಎಂಬ ಸಂದೇಶ ರವಾನಿಸಿದ್ದಾರೆ.

ಖಾಲಿಸ್ತಾನ ಪರ ಬೆಂಬಲಿಗರ ದುರ್ವರ್ತನೆ ಕುರಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ವಂದೆ ಮಾತರಂ’ ಘೋಷಣೆಯನ್ನೂ ಮೊಳಗಿಸಿದ್ದಾರೆ. ರ‍್ಯಾಲಿ ವೇಳೆ ಕೆಲ ಕಿಡಿಗೇಡಿಗಳು ಖಾಲಿಸ್ತಾನ ಪರ ಘೋಷಣೆಗಳನ್ನೂ ಕೂಗಿದ್ದಾರೆ. ಮುಂಜಾಗ್ರತಾ ದೃಷ್ಟಿಯಿಂದ ಸ್ಥಳದಲ್ಲಿ ಪೊಲೀಸರನ್ನು ನಿಯೋಜಿಸಲಾಗಿತ್ತು.

ಇತ್ತೀಚಿನ ದಿನಗಳಲ್ಲಿ ಕೆನಡಾ, ಆಸ್ಟ್ರೇಲಿಯಾ ಮತ್ತು ಬ್ರಿಟನ್‌ನಲ್ಲಿ ಭಾರತ ವಿರೋಧಿ ಚಟುವಟಿಕೆಗಳು ಹೆಚ್ಚಿವೆ. ಖಾಲಿಸ್ತಾನ ಪರ ಬೆಂಬಲಿಗರು ಈ ದೇಶಗಳಲ್ಲಿನ ಕೆಲ ಹಿಂದೂ ದೇವಾಲಯಗಳನ್ನು ನಾಶಪಡಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT