ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ಬಿಕ್ಕಟ್ಟು: ಚುಶುಲ್‌ನಲ್ಲಿ ಭಾರತ–ಚೀನಾ ಸೇನಾ ಕಮಾಂಡರ್ ಮಟ್ಟದ ಸಭೆ

Last Updated 11 ಸೆಪ್ಟೆಂಬರ್ 2020, 13:33 IST
ಅಕ್ಷರ ಗಾತ್ರ

ಲೇಹ್‌: ಉಭಯ ದೇಶಗಳ ವಿದೇಶಾಂಗ ಸಚಿವರ ಸಭೆ ಬಳಿಕ ಇದೀಗ ಭಾರತ ಮತ್ತು ಚೀನಾ ಸೇನೆಯ ಕಮಾಂಡರ್‌ ಮಟ್ಟದ ಸಭೆಯು ಲಡಾಖ್‌ನ ಚುಶುಲ್‌ನಲ್ಲಿ ಶುಕ್ರವಾರ ನಡೆದಿದೆ ಎಂದು ವರದಿಯಾಗಿದೆ.

ಸಭೆಯು ಇಂದು ಬೆಳಗ್ಗೆ 11ರಿಂದ ಮಧ್ಯಾಹ್ನ 3 ಗಂಟೆ ವರೆಗೆ ನಡೆದಿದೆ ಎಂದು ಭಾರತೀಯ ಸೇನೆಯ ಮೂಲಗಳು ತಿಳಿಸಿವೆ.

ವಿದೇಶಾಂಗ ವ್ಯವಹಾರಗಳ ಸಚಿವ ಎಸ್‌.ಜೈಶಂಕರ್‌ ಅವರು ಚೀನಾ ವಿದೇಶಾಂಗ ಸಚಿವ ವಾಂಗ್‌ ಇ ಅವರೊಂದಿಗೆ ಗುರುವಾರ ರಷ್ಯಾದಲ್ಲಿ ಸಭೆ ನಡೆಸಿ ಸದ್ಯದ ಬಿಕ್ಕಟ್ಟಿನ ಬಗ್ಗೆ ಸುಮಾರು ಎರಡೂವರೆ ಗಂಟೆ ಕಾಲ ಸಮಾಲೋಚನೆ ನಡೆಸಿದ್ದರು.

ಸಭೆ ವೇಳೆ ಜೈಶಂಕರ್‌ ಅವರು,ಗಡಿಯಲ್ಲಿ ನಡೆದ ಇತ್ತೀಚಿನ ಬೆಳವಣಿಗೆಗಳು ಉಭಯ ದೇಶಗಳ ದ್ವಿಪಕ್ಷೀಯ ಸಂಬಂಧ ವೃದ್ಧಿಯ ಮೇಲೆ ಪರಿಣಾಮ ಉಂಟು ಮಾಡಿದ್ದು, ಈ ಬಗ್ಗೆ ನಿರ್ಣಯ ತಳೆಯುವುದು ಎರಡೂ ದೇಶಗಳ ಹಿತದೃಷ್ಟಿಯಿಂದ ಅನಿವಾರ್ಯವಾಗಿದೆ ಎಂದು ಹೇಳಿದ್ದಾರೆ ಎನ್ನಲಾಗಿದೆ.

ಇಂದು ನಡೆದ ಸಭೆಯಲ್ಲಿ, ಗಡಿ ಬಿಕ್ಕಟ್ಟುನಿರ್ವಹಣೆಗೆ ಸಂಬಂಧಿಸಿದ ಎಲ್ಲ ಒಪ್ಪಂದಗಳಿಗೆ ಸಂಪೂರ್ಣ ಒಪ್ಪಿಗೆಯನ್ನು ನಿರೀಕ್ಷಿಸಿದ್ದೇವೆ. ಯಥಾಸ್ಥಿತಿಯನ್ನು ಬದಲಾಯಿಸುವ ಯಾವುದೇ ಪ್ರಯತ್ನವನ್ನು ಒಪ್ಪುವುದಿಲ್ಲ ಎಂದು ಭಾರತದ ಮೂಲದವರು ಸ್ಪಷ್ಟವಾಗಿ ತಿಳಿಸಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಲಡಾಖ್‌ನ ಚುಶುಲ್‌ ಪ್ರಾಂತ್ಯದಲ್ಲಿರುವ ಪಾಂಗಾಂಗ್‌ ಸರೋವರ ಪ್ರದೇಶದಲ್ಲಿ ಯಥಾಸ್ಥಿತಿ ಬದಲಿಸುವ ಪ್ರಯತ್ನವನ್ನುಚೀನಾ ಇತ್ತೀಚೆಗೆನಡೆಸಿತ್ತು. ಆದರೆ ಅದನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT