ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಡಿ ಬಿಕ್ಕಟ್ಟು: ಏಳನೇ ಸುತ್ತಿನ ಮಾತುಕತೆಗೆ ಸಿದ್ಧತೆ

Last Updated 2 ಅಕ್ಟೋಬರ್ 2020, 4:14 IST
ಅಕ್ಷರ ಗಾತ್ರ

ನವದೆಹಲಿ:ಪೂರ್ವ ಲಡಾಖ್‌ ಗಡಿಯಲ್ಲಿನ ಬಿಕ್ಕಟ್ಟು ಶಮನಕ್ಕೆ ಏಳನೇ ಸುತ್ತಿನ ಮಾತುಕತೆಗೆದಿನ ನಿಗದಿ ಮಾಡಲು ಭಾರತ–ಚೀನಾ ಸೇನೆಯ ಹಿರಿಯ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.

‘ದ್ವಿಪಕ್ಷೀಯ ಒಪ್ಪಂದದ ಪ್ರಕಾರ ವಾಸ್ತವ ನಿಯಂತ್ರಣ ರೇಖೆಯಿಂದ(ಎಲ್‌ಎಸಿ) ಆದಷ್ಟು ಶೀಘ್ರದಲ್ಲೇ ಎರಡೂ ರಾಷ್ಟ್ರಗಳ ಸೇನಾ ಸಿಬ್ಬಂದಿ ಸಂಪೂರ್ಣವಾಗಿ ಹಿಂದೆ ಸರಿಯುವ ಕುರಿತು ಈ ಸಭೆಯಲ್ಲಿ ಚರ್ಚೆ ನಡೆಯಲಿದೆ’ ಎಂದು ಸಚಿವಾಲಯದ ವಕ್ತಾರ ಅನುರಾಗ್‌ ಶ್ರೀವಾಸ್ತವ ತಿಳಿಸಿದ್ದಾರೆ. ಗಡಿ ಬಿಕ್ಕಟ್ಟು ಶಮನಕ್ಕೆ ಸಚಿವರು ಹಾಗೂ ಅಧಿಕಾರಿಗಳ ಮಟ್ಟದಲ್ಲಿ ಈಗಾಗಲೇ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದು, ಇಲ್ಲಿಯವರೆಗೂ ಯಾವುದೇ ದೃಢವಾದ ನಿಲುವು ವ್ಯಕ್ತವಾಗಿಲ್ಲ.

ಸೆ.21ರಂದು ಆರನೇ ಸುತ್ತಿನ ಮಾತುಕತೆ ನಡೆದಿತ್ತು. ಈ ಸಂದರ್ಭದಲ್ಲಿಸಂಘರ್ಷ ಶಮನಕ್ಕೆ ಎರಡೂ ದೇಶಗಳುಮಾಡಿಕೊಂಡಿರುವ ಐದು ಅಂಶಗಳ ಸೂತ್ರವನ್ನು ಅನುಷ್ಠಾನಕ್ಕೆ ತರುವ ಕುರಿತು ಚರ್ಚೆ ನಡೆದಿತ್ತು. ಜೊತೆಗೆ ಮುಂಚೂಣಿ ನೆಲೆಗಳಿಗೆ ಮತ್ತಷ್ಟು ಯೋಧರನ್ನು ಕಳುಹಿಸದೇ ಇರಲು ಹಾಗೂ ಬಿಕ್ಕಟ್ಟನ್ನು ಮತ್ತಷ್ಟು ಹೆಚ್ಚಿಸುವ ಯಾವುದೇ ಕ್ರಮಗಳನ್ನು ತೆಗೆದುಕೊಳ್ಳದೇ ಇರುವ ನಿರ್ಧಾರ ಕೈಗೊಳ್ಳಲಾಗಿತ್ತು.

ಇದೇ ಸಂದರ್ಭದಲ್ಲಿ, 71ನೇ ಸಂಸ್ಥಾಪನಾ ದಿನದ ಹಿನ್ನೆಲೆಯಲ್ಲಿವಿದೇಶಾಂಗ ಸಚಿವ ಜೈಶಂಕರ್‌ ಅವರು, ಚೀನಾ ವಿದೇಶಾಂಗ ಸಚಿವ ವಾಂಗ್‌ ಅವರಿಗೆ ಶುಭ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT