ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೌರತ್ವ: ಮುಸ್ಲಿಮೇತರ ನಿರಾಶ್ರಿತರಿಂದ ಅರ್ಜಿ ಆಹ್ವಾನ

Last Updated 28 ಮೇ 2021, 21:51 IST
ಅಕ್ಷರ ಗಾತ್ರ

ನವದೆಹಲಿ:ಅಫ್ಗಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಬಂದು ಗುಜರಾತ್‌, ರಾಜಸ್ಥಾನ, ಛತ್ತೀಸಗಡ, ಹರಿಯಾಣ ಮತ್ತು ಪಂಜಾಬ್‌ನ 13 ಜಿಲ್ಲೆಗಳಲ್ಲಿ ನೆಲೆಸಿರುವಹಿಂದೂ, ಸಿಖ್‌, ಜೈನ, ಬೌದ್ಧ ಧರ್ಮೀಯರು ಸೇರಿದಂತೆ ಮುಸ್ಲಿಮೇತರರಿಂದ ಭಾರತದ ಪೌರತ್ವಕ್ಕಾಗಿ ಕೇಂದ್ರ ಸರ್ಕಾರವು ಶುಕ್ರವಾರ ಅರ್ಜಿ ಆಹ್ವಾನಿಸಿದೆ.

1955ರ ಪೌರತ್ವ ಕಾಯ್ದೆ ಮತ್ತು 2009ರ ಕಾನೂನಿನಡಿಯಲ್ಲಿ ರೂಪಿಸಲಾದ ನಿಯಮಗಳನ್ನು ತಕ್ಷಣ ಜಾರಿಗೆ ತರಲು ಕೇಂದ್ರ ಗೃಹ ಸಚಿವಾಲಯವು ಈ ಅಧಿಸೂಚನೆಯನ್ನು ಹೊರಡಿಸಿದೆ. 2019ರ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿಯಲ್ಲಿ ಸರ್ಕಾರ ಇನ್ನೂ ನಿಯಮಗಳನ್ನು ರೂಪಿಸಿಲ್ಲ.

ಪೌರತ್ವ ತಿದ್ದುಪಡಿ ಕಾಯ್ದೆಯನ್ನು 2019ರಲ್ಲಿ ಜಾರಿಗೆ ತಂದಾಗ ಇದನ್ನು ವಿರೋಧಿಸಿ ದೇಶದಾದ್ಯಂತ ಭಾರಿ ಪ್ರತಿಭಟನೆಗಳು ನಡೆದಿದ್ದವು.

ಬಾಂಗ್ಲಾದೇಶ, ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾಗಿ 2014 ರ ಡಿಸೆಂಬರ್ 31 ರವರೆಗೆ ಭಾರತಕ್ಕೆ ಬಂದ ಅಲ್ಪಸಂಖ್ಯಾತ ಹಿಂದೂ, ಸಿಖ್, ಜೈನ, ಬೌದ್ಧ, ಪಾರ್ಸಿ ಮತ್ತು ಕ್ರೈಸ್ತರಿಗೆ ಭಾರತದ ಪೌರತ್ವ ನೀಡುವುದು ಸಿಎಎ ಉದ್ದೇಶವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT