ಮಂಗಳವಾರ, ಮೇ 24, 2022
26 °C
ಎರಡಂಕಿಯಷ್ಟು ಬೆಳವಣಿಗೆ ದರ ಸಾಧಿಸುವ ಗುರಿ

ಐಟಿ ಉದ್ಯಮದ ಬೆಳವಣಿಗೆ ಅತ್ಯುತ್ತಮ: ಅಜೀಂ ಪ್ರೇಮಜಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಮಾಹಿತಿ ತಂತ್ರಜ್ಞಾನ ಉದ್ಯಮವು ಪ್ರಗತಿ ಪಥದಲ್ಲಿ ಸಾಗಿದೆ. ಹೀಗಾಗಿ, ಬೆಳವಣಿಗೆ ದರದಲ್ಲೂ ಪ್ರಗತಿಯಾಗಲಿದೆ ಎಂದು ವಿಪ್ರೊ ಸಂಸ್ಥಾಪಕ ಅಜೀಂ ಪ್ರೇಮ್‌ಜಿ ಹೇಳಿದ್ದಾರೆ.

ಬಾಂಬೆ ಚಾರ್ಟರ್ಡ್‌ ಅಕೌಂಟಂಟ್ಸ್‌ ಸೊಸೈಟಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಾಂಕ್ರಾಮಿಕ ಕಾಯಿಲೆ ಸಂದರ್ಭದಲ್ಲಿ ಜಾರಿಗೊಳಿಸಲಾಗಿದ್ದ ಲಾಕ್‌ಡೌನ್‌ ನಡುವೆಯೂ ಮಾಹಿತಿ ತಂತ್ರಜ್ಞಾನ ಉದ್ಯಮವು ನಿರಂತರವಾಗಿ ಕಾರ್ಯನಿರ್ವಹಿಸಿದ್ದು, ಹಲವು ಬದಲಾವಣೆಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.

ಪ್ರಸಕ್ತ ಹಣಕಾಸು ವರ್ಷದಲ್ಲಿ ಎರಡಂಕಿಯಷ್ಟು ಬೆಳವಣಿಗೆ ದರ ಸಾಧಿಸುವ ವಿಶ್ವಾಸವಿದೆ. ಸಾಂಕ್ರಾಮಿಕ ಕಾಯಿಲೆಯ ನಡುವೆಯೂ ಉದ್ಯಮವು ಶೇಕಡ 2ರಿಂದ 3ರಷ್ಟು ಬೆಳವಣಿಗೆ ಸಾಧಿಸಿತ್ತು. ಈ ಬೆಳವಣಿಗೆ ಎರಡಂಕಿಗೆ ತಲುಪಲಿದೆ. ಜತೆಗೆ, 1.58 ಲಕ್ಷ ಹೊಸ ಉದ್ಯೋಗಗಳನ್ನು ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.

ಕೋವಿಡ್‌–19 ಹಬ್ಬಿದ ಬಳಿಕ ಮಾಹಿತಿ ತಂತ್ರಜ್ಞಾನ ಉದ್ಯಮವು ಮನೆಯಿಂದಲೇ ಕೆಲಸ ಮಾಡುವ ಪದ್ಧತಿಯನ್ನು ಅಳವಡಿಸಿಕೊಂಡಿತು. ಈಗಲೂ ಶೇಕಡ 90ರಷ್ಟು ಸಿಬ್ಬಂದಿ ಮನೆಯಿಂದಲೇ ಕೆಲಸ ಮಾಡುತ್ತಿದ್ದರೆ ಎಂದು ವಿವರಿಸಿದ್ದಾರೆ.

2020–2021ರ ಹಣಕಾಸು ವರ್ಷದಲ್ಲಿ ಮಾಹಿತಿ ತಂತ್ರಜ್ಞಾನ ಉದ್ಯಮವು 19,400 ಕೋಟಿ ಡಾಲರ್‌ (₹14.49 ಲಕ್ಷ ಕೋಟಿ) ಆದಾಯ ಗಳಿಸಿತ್ತು ಎಂದು ನಾಸ್ಕಾಂ ತಿಳಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು