ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಸೆಸ್ಟರ್‌ ಹಿಂಸಾಚಾರ ತಡೆಗೆ ಬ್ರಿಟನ್‌ ಸಂಪರ್ಕದಲ್ಲಿ ಭಾರತ

Last Updated 22 ಸೆಪ್ಟೆಂಬರ್ 2022, 14:38 IST
ಅಕ್ಷರ ಗಾತ್ರ

ನವದೆಹಲಿ: ಲಿಸೆಸ್ಟರ್ ಮತ್ತು ಬರ್ಮಿಂಗ್‌ಹ್ಯಾಮ್‌ನಲ್ಲಿನ ಕೋಮು ಘರ್ಷಣೆ ಘಟನೆಗಳ ಹಿನ್ನೆಲೆಯಲ್ಲಿ ಭಾರತೀಯ ಸಮುದಾಯ ಗುರಿಯಾಗಿಸಿ ನಡೆಯುತ್ತಿರುವಹಿಂಸಾಚಾರದ ದಾಳಿ ತಡೆಗಟ್ಟಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಲು ಭಾರತೀಯ ಹೈಕಮಿಷನ್, ಬ್ರಿಟನ್‌ ಹೈಕಮಿಷನ್‌ನೊಂದಿಗೆ ಸಂಪರ್ಕದಲ್ಲಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಗುರುವಾರ ತಿಳಿಸಿದೆ.

‘ಹಿಂಸಾಚಾರ ಖಂಡಿಸಿ ಭಾರತೀಯ ಹೈಕಮಿಷನ್‌ ಹೇಳಿಕೆ ನೀಡಿದೆ. ಮತ್ತಷ್ಟು ದಾಳಿಗಳು ನಡೆಯದಂತೆ ತಡೆಯಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮಕ್ಕಾಗಿ ನಾವು ರಾಜತಾಂತ್ರಿಕ ಹಾಗೂ ಭದ್ರತಾ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ’ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ‌‌ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ನ್ಯೂಯಾರ್ಕ್‌ನಲ್ಲಿ ಬ್ರಿಟನ್‌ ವಿದೇಶಾಂಗ ಸಚಿವ ಜೇಮ್ಸ್‌ ಕ್ಲೆವರ್‌ಲಿ ಅವರ ಜತೆಗಿನ ಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್. ಜೈಶಂಕರ್ ಈ ವಿಷಯದ ಬಗ್ಗೆ ದನಿಎತ್ತಿದ್ದಾರೆ ಎಂದು ಅವರು ಹೇಳಿದರು.

ಭಾರತೀಯ ಸಮುದಾಯದವರ ಮೇಲಿನ ದೌರ್ಜನ್ಯ ಮತ್ತು ಲಿಸೆಸ್ಟರ್‌ ನಗರದಲ್ಲಿ ಹಿಂದೂ ದೇಗುಲಗಳು ಹಾಗೂ ಆಸ್ತಿ ಧ್ವಂಸ ಘಟನೆಗಳನ್ನು ಭಾರತೀಯ ಹೈಕಮಿಷನ್ ತೀವ್ರವಾಗಿ ಖಂಡಿಸಿತ್ತು. ಹಿಂಸಾಚಾರದಲ್ಲಿ ಭಾಗಿಯಾದವರ ವಿರುದ್ಧ ತಕ್ಷಣದ ಕ್ರಮಕ್ಕೂ ಒತ್ತಾಯಿಸಿತ್ತು.

ಬರ್ಮಿಂಗ್‌ಹ್ಯಾಮ್‌ ನಗರದಲ್ಲಿ ಹಿಂದೂ ದೇವಾಲಯದ ಹೊರಗೆ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪೊಲೀಸ್‌ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಪಟಾಕಿ ಹಚ್ಚಿದ ಯುವಕನನ್ನು ಬುಧವಾರ ಪೊಲೀಸರು ಬಂಧಿಸಿದರು. ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಮತ್ತಷ್ಟು ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT