ಶನಿವಾರ, ಸೆಪ್ಟೆಂಬರ್ 18, 2021
30 °C

ಸಿಂಗಪುರ: ಧಾರ್ಮಿಕ ಭಾವನೆಗೆ ಧಕ್ಕೆ- ಭಾರತ ಮೂಲದ ವ್ಯಕ್ತಿಗೆ ಜೈಲು ಶಿಕ್ಷೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಸಿಂಗಪುರ: ‘ಸಾರ್ವಜನಿಕ ಸ್ಥಳದಲ್ಲಿ ಮದ್ಯಸೇವನೆ ಮತ್ತು ಧಾರ್ಮಿಕ ಭಾವನೆಗೆ ಧಕ್ಕೆಯನ್ನುಂಟು ಮಾಡಿದ ಪ್ರಕರಣದಡಿ 53 ವರ್ಷದ ಭಾರತೀಯ ಮೂಲದ ವ್ಯಕ್ತಿಗೆ ಸಿಂಗಪುರದಲ್ಲಿ ಜೈಲು ಶಿಕ್ಷೆ ವಿಧಿಸಲಾಗಿದೆ’ ಎಂದು ಸ್ಟ್ರೇಟ್ಸ್‌ ಟೈಮ್ಸ್‌ ಪತ್ರಿಕೆ ವರದಿ ಮಾಡಿದೆ.

‘ಜೂನ್‌ 30ರಂದು ಜಸ್ವಿಂದರ್‌ ಸಿಂಗ್‌ ಎಂಬಾತ ಮದ್ಯ ಸೇವಿಸಿ ಸಾರ್ವಜನಿಕ ಬಸ್‌ ಹತ್ತಿದ್ದಾನೆ. ಈ ವೇಳೆ ಅವನು ಮಾಸ್ಕ್‌ ಅನ್ನು ಕೂಡ ಸರಿಯಾದ ಧರಿಸಿರಲಿಲ್ಲ. ಬಳಿಕ ಬಸ್‌ ಚಾಲಕನಿಗೆ ತೊಂದರೆ ಕೊಡಲು ಆರಂಭಿಸಿದ್ದಾನೆ. ಈ ವೇಳೆ ಚಾಲಕನ ಧರ್ಮ ಮತ್ತು ತಾಯಿಯನ್ನು ನಿಂದಿಸಿದ್ದಲ್ಲದೇ, ಅವರನ್ನು ಭಯೋತ್ಪಾದಕ ಎಂದು ಕರೆದು, ಅವಮಾನಿಸಿದ್ದಾರೆ’ ಎಂದು ವರದಿ ಹೇಳಿದೆ.

ಈ ಹಿನ್ನೆಲೆಯಲ್ಲಿ ಪೊಲೀಸರು ಜಸ್ವಿಂದರ್‌ ಸಿಂಗ್‌ನನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರು ಮಾಡಿಸಿದ್ದರು. ಈ ಬಗ್ಗೆ ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಾಲಯವು ಆತನಿಗೆ 13 ವಾರ, 12 ದಿನಗಳ ಜೈಲು ಶಿಕ್ಷೆ ವಿಧಿಸಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು