ಬೆಂಗಳೂರು: ‘ರಾಹುಲ್ ಗಾಂಧಿ ಅವರೇ, ನೀವು ಕ್ಷುಲ್ಲಕ ಕುಟುಂಬ ರಾಜಕಾರಣಿ. ದೇಶಕ್ಕೆ ನಿಮ್ಮ ಕೊಡುಗೆ ದೊಡ್ಡ ಝೀರೋ’ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದ್ದಾರೆ.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಟ್ವೀಟ್ ಮಾಡಿರುವ ಸಿ.ಟಿ.ರವಿ, ‘ಆತ್ಮೀಯ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರು ಭಾರತ ಮಾತೆಯ ಸೇವೆಗಾಗಿ ತಮ್ಮ ಇಡೀ ಜೀವನವನ್ನೇ ಮುಡಿಪಾಗಿಟ್ಟ ಸ್ವಯಂ ನಿರ್ಮಿತ ವ್ಯಕ್ತಿ. ಆದರೆ, ನೀವು ಕ್ಷುಲ್ಲಕ ಕುಟುಂಬ ರಾಜಕಾರಣಿ. ದೇಶಕ್ಕೆ ನಿಮ್ಮ ಕೊಡುಗೆ ದೊಡ್ಡ ಝೀರೋ’ ಎಂದು ಕಿಡಿಕಾರಿದ್ದಾರೆ.

ಮುಂದುವರಿದು ‘ನಿಮ್ಮ ‘ಕದ್ದ ಉಪನಾಮ’ ತೆಗೆದು ಭಾರತದಲ್ಲಿ ಯಾವುದೇ ಭಾಗದಲ್ಲಾದರೂ ಚುನಾವಣೆಯಲ್ಲಿ ಸ್ಫರ್ಧಿಸಿ ಗೆಲುವು ಸಾಧಿಸುವಂತೆ ನಾನು ನಿಮಗೆ ಸವಾಲು ಹಾಕುತ್ತೇನೆ’ ಎಂದು ರಾಹುಲ್ ಗಾಂಧಿ ವಿರುದ್ಧ ಸಿ.ಟಿ.ರವಿ ಗುಡುಗಿದ್ದಾರೆ.

ಇದನ್ನೂ ಓದಿ:ಆರೋಪಿಗಳಿಗೆ ಹಲಾಲ್ ಕಬಾಬ್ ನೀಡಿ ಉಪಚರಿಸಬೇಕೇ: ಕಾಂಗ್ರೆಸ್ಗೆ ಬಿಜೆಪಿ ಪ್ರಶ್ನೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.