ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2024ಕ್ಕೆ ಭಾರತದ ರಸ್ತೆಗಳು ಅಮೆರಿಕದ ರಸ್ತೆಗಳಂತೆ ಆಗುತ್ತವೆ: ನಿತಿನ್ ಗಡ್ಕರಿ

ಅಂತರರಾಷ್ಟ್ರೀಯ ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಒತ್ತು: ಕೇಂದ್ರ ರಸ್ತೆ ಸಾರಿಗೆ ಸಚಿವ
Last Updated 17 ಡಿಸೆಂಬರ್ 2022, 3:04 IST
ಅಕ್ಷರ ಗಾತ್ರ

ನವದೆಹಲಿ: 2024ರ ಅಂತ್ಯದ ಒಳಗಾಗಿ ಭಾರತೀಯ ರಸ್ತೆಗಳು ಅಮೆರಿಕದ ರಸ್ತೆಗಳ ಗುಣಮಟ್ಟಕ್ಕೆ ಸಮವಾಗಿರುತ್ತದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ.

ಇಲ್ಲಿ ಶುಕ್ರವಾರ ನಡೆದ ಭಾರತೀಯ ವಾಣಿಜ್ಯ ಹಾಗೂ ಕೈಗಾರಿಕಾ ಒಕ್ಕೂಟದ (ಎಫ್‌ಐಸಿಸಿಐ) 95ನೇ ವಾರ್ಷಿಕ ಸಮ್ಮೇಳನದಲ್ಲಿ ಅವರು ಮಾತನಾಡಿದರು.

‘ನಾವು ದೇಶದಲ್ಲಿ ಅಂತರರಾಷ್ಟ್ರೀಯ ಗುಣಮಟ್ಟದ ರಸ್ತೆ ಸೌಕರ್ಯವನ್ನು ಮಾಡುತ್ತಿದ್ದೇವೆ. 2024ರ ಅಂತ್ಯದ ವೇಳೆಗೆ ನಮ್ಮ ರಸ್ತೆಗಳು ಅಮೆರಿಕ ರಸ್ತೆಗಳ ಗುಣಮಟ್ಟಕ್ಕೆ ಸಮನಾಗಿರುತ್ತದೆ ಎಂದು ನಾನು ಭರವಸೆ ನೀಡುತ್ತೇನೆ‘ ಎಂದು ಗಡ್ಕರಿ ಹೇಳಿದ್ದಾರೆ.

‘ನಮ್ಮ ಸರಕು ವೆಚ್ಚ ದೊಡ್ಡ ಸಮಸ್ಯೆಯಾಗಿದೆ. ಸದ್ಯ ಸರಕು ವೆಚ್ಚೇ ಶೇ 16ರಷ್ಟಿದೆ. 2024ರ ಅಂತ್ಯಕ್ಕೆ ಇದನ್ನು ಶೇ 9 ಅಂಕಿಗೆ ಇಳಿಯುವಂತೆ ಮಾಡುತ್ತೇವೆಎಂದು ಭರವಸೆ ನೀಡುತ್ತೇನೆ‘ ಎಂದು ಅವರು ಹೇಳಿದ್ದಾರೆ.

ಜಗತ್ತಿನ ಶೇ 40 ರಷ್ಟು ಸಂ‍ಪನ್ಮೂಲ, ನಿರ್ಮಾಣ ವಲಯಕ್ಕೆ ಖರ್ಚಾಗುತ್ತದೆ. ನಿರ್ಮಾಣದಲ್ಲಿ ನಾವು ಸ್ಟೀಲ್‌ಗೆ ಬದಲಾಗಿ ಪರ್ಯಾಯ ವಸ್ತು ಬಳಸಲು ಗರಿಷ್ಠ ಪ್ರಯತ್ನ ಪಡುತ್ತಿದ್ದೇವೆ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT