ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತದ ಏಳು ರಾಜ್ಯಗಳಲ್ಲಿ ಶೇ. 87.73ರಷ್ಟು ಹೊಸ ಕೋವಿಡ್‌ ಪ್ರಕರಣಗಳು

Last Updated 14 ಮಾರ್ಚ್ 2021, 9:36 IST
ಅಕ್ಷರ ಗಾತ್ರ

ನವದೆಹಲಿ: ‘ಮಹಾರಾಷ್ಟ್ರ, ಕೇರಳ, ಪಂಜಾಬ್‌, ಕರ್ನಾಟಕ, ಗುಜರಾತ್‌, ತಮಿಳುನಾಡು ಮತ್ತು ಮಧ್ಯಪ್ರದೇಶದಲ್ಲಿ ದೈನಂದಿನ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ. ದೈನಂದಿನ ಪ್ರಕರಣಗಳ ಪೈಕಿ ಈ ಏಳು ರಾಜ್ಯಗಳು ಸೇರಿ ಶೇಕಡ 87.73 ಪ್ರಕರಣ ವರದಿಯಾಗಿದೆ’ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಭಾನುವಾರ ತಿಳಿಸಿದೆ.

ಮಹಾರಾಷ್ಟ್ರದಲ್ಲಿ ಹೊಸದಾಗಿ 15,602 ಪ್ರಕರಣಗಳು ವರದಿಯಾಗಿವೆ. ಇದು ಅತಿ ಹೆಚ್ಚು ದೈನಂದಿನ ಪ್ರಕರಣಗಳಾಗಿವೆ. ಕೇರಳದಲ್ಲಿ 2,035 ಮತ್ತು ಪಂಜಾಬ್‌ನಲ್ಲಿ 1,510 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿವೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2.10 ಲಕ್ಷ ತಲುಪಿದ್ದು, ಇದರಲ್ಲಿ ಮಹಾರಾಷ್ಟ್ರ, ಕೇರಳ ಮತ್ತು ಪಂಜಾಬ್‌ ಶೇಕಡ 76.93 ರಷ್ಟು ಭಾಗವನ್ನು ಹೊಂದಿದೆ. ದೇಶದಲ್ಲಿ ಈವರೆಗೆ 1,09,89,897 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಪ್ರತಿನಿತ್ಯ ಸುಮಾರು 16,637 ಮಂದಿ ಸೋಂಕಿನಿಂದ ಚೇತರಿಸಿಕೊಳ್ಳುತ್ತಿದ್ದಾರೆ. ಇದರಲ್ಲಿ ಆರು ರಾಜ್ಯಗಳು ಶೇಕಡ 83.13 ರಷ್ಟು ಪಾಲನ್ನು ಹೊಂದಿದೆ.

ಆರು ರಾಜ್ಯಗಳು ಶೇಕಡ 84.47 ರಷ್ಟು ಸಾವಿನ ಪ್ರಮಾಣವನ್ನು ಹೊಂದಿದೆ. ಮಹಾರಾಷ್ಟ್ರದಲ್ಲಿ ಹೊಸದಾಗಿ 88 ಮಂದಿ ಸಾವಿಗೀಡಾಗಿದ್ದರೆ, ಪಂಜಾಬ್‌ನಲ್ಲಿ 22 ಹಾಗೂ ಕೇರಳದಲ್ಲಿ 12 ಮಂದಿ ಮೃತಪಟ್ಟಿದ್ಧಾರೆ.

ಈವರೆಗೆ 2,97,38,409 ಲಸಿಕೆಯ ಡೋಸ್‌ಗಳನ್ನು ನೀಡಲಾಗಿದೆ. 73,47,895 ಆರೋಗ್ಯ ಕಾರ್ಯಕರ್ತರು ಮತ್ತು 11,35,573 ಮಂಚೂಣಿ ಕಾರ್ಯಕರ್ತರಿಗೆ ಮೊದಲ ಡೋಸ್‌ ನೀಡಲಾಗಿದೆ. 42,95,201 ಆರೋಗ್ಯ ಕಾರ್ಯಕರ್ತರು ಮತ್ತು 73,32,641 ಮಂಚೂಣಿ ಕಾರ್ಯಕರ್ತರಿಗೆ ಎರಡನೇ ಡೋಸ್‌ ನೀಡಲಾಗಿದೆ ಎಂದು ಸಚಿವಾಲಯ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT