ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ–ಬೈಡನ್‌ ಭೇಟಿ: ರಾಜತಾಂತ್ರಿಕರ ಮಟ್ಟದ ಚರ್ಚೆ

Last Updated 2 ಸೆಪ್ಟೆಂಬರ್ 2021, 21:56 IST
ಅಕ್ಷರ ಗಾತ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್‌ ಅವರ ಭೇಟಿ ಮತ್ತು ಕ್ವಾಡ್ ಶೃಂಗಸಭೆ ಕುರಿತಂತೆ ಭಾರತ ಮತ್ತು ಅಮೆರಿಕದ ಹಿರಿಯ ರಾಜತಾಂತ್ರಿಕರು ಗುರುವಾರ ಚರ್ಚೆ ನಡೆಸಿದರು.

ಈ ಮಾಸಾಂತ್ಯದ ವೇಳೆಗೆ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಅವರು ನ್ಯೂಯಾರ್ಕ್‌ಗೆ ಭೇಟಿ ನೀಡುವ ಕಾರ್ಯಕ್ರಮವಿದೆ.

ಪ್ರವಾಸದ ಅವಧಿಯಲ್ಲಿಯೇ ವಾಷಿಂಗ್ಟನ್‌ ಡಿ.ಸಿಗೂ ಭೇಟಿ ನೀಡುವುದು ಹಾಗೂ ಅಧ್ಯಕ್ಷ ಜೋ ಬೈಡನ್‌ ಅವರೊಂದಿಗೆ ಉಭಯದ ದೇಶಗಳ ನಡುವೆ ಬಾಂಧವ್ಯ ವೃದ್ಧಿಗೆ ದ್ವಿಪಕ್ಷೀಯ ಮಾತುಕತೆಯನ್ನು ಆಯೋಜಿಸಲು ಭಾರತ ಚಿಂತನೆ ನಡೆಸಿದೆ.

ಇನ್ನೊಂದೆಡೆ ಜೋಬೈಡನ್‌ ಅವರು ಪ್ರಧಾನಿ ಮೋದಿ, ಆಸ್ಟ್ರೇಲಿಯದ ಪ್ರಧಾನಿ ಸ್ಕಾಟ್‌ ಮಾರಿಸನ್‌, ಜಪಾನ್‌ ಪ್ರಧಾನಿ ಯೋಶಿಹಿಡೆ ಸುಗಾ ಅವರನ್ನು ಒಳಗೊಂಡು ಕ್ವಾಡ್‌ ಸಭೆ ಆಯೋಜಿಸಲು ಚಿಂತನೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT