ಗುರುವಾರ , ಫೆಬ್ರವರಿ 25, 2021
28 °C

Covid-19 India Update| ಸಕ್ರಿಯ ಪ್ರಕರಣಗಳು ಶೇ 2ಕ್ಕಿಂತ ಕಡಿಮೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದಲ್ಲಿ ಇದೇ ಮೊದಲ ಬಾರಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ 2,08,826ರಷ್ಟಿದ್ದು, ಒಟ್ಟಾರೆ ಶೇಕಡ 2ಕ್ಕಿಂತ ಕಡಿಮೆಯಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೈನಂದಿನ ಪ್ರಕರಣಗಳಲ್ಲಿ ಇಳಿಕೆಯಾಗಿರುವುದರಿಂದಾಗಿ ಸಕ್ರಿಯ ಪ್ರಕರಣಗಳು ಕಡಿಮೆಯಾಗಿವೆ ಎಂದು ಸಚಿವಾಲಯ ಹೇಳಿದೆ.

ದೇಶದಲ್ಲಿ ಕಳೆದ 10 ದಿನಗಳಿಂದ 20,000 ಕ್ಕೂ ಕಡಿಮೆ ದೈನಂದಿನ ಪ್ರಕರಣಗಳು ವರದಿಯಾಗುತ್ತಿವೆ. ಅಲ್ಲದೆ ಚೇತರಿಕೆ ಪ್ರಮಾಣವು, ಸಕ್ರಿಯ ಪ್ರಕರಣಗಳಿಕ್ಕಿಂತ ಹೆಚ್ಚಿದೆ. ದೇಶದಲ್ಲಿ ಈವರೆಗೆ ಒಟ್ಟು 10,196,885 ಮಂದಿ ಗುಣಮುಖರಾಗಿದ್ದಾರೆ.

ದೇಶದಲ್ಲಿ ಕಳೆದ 23 ದಿನಗಳಲ್ಲಿ ಸೋಂಕಿನಿಂದಾಗಿ ಪ್ರತಿನಿತ್ಯ 300ಕ್ಕಿಂತ ಕಡಿಮೆ ಜನರು ಸಾವಿಗೀಡಾಗಿದ್ಧಾರೆ ಎಂದು ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 15,144 ಹೊಸ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಭಾನುವಾರ ಒಟ್ಟು ಪ್ರಕರಣಗಳ ಸಂಖ್ಯೆ 1,05,57,985ಕ್ಕೆ ಏರಿಕೆಯಾಗಿದೆ. ಚೇತರಿಕೆಯ ಒಟ್ಟು ಪ್ರಮಾಣವು ಶೇಕಡ 96.58ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು