ಭಾನುವಾರ, 4 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೇಶದ ಗಡಿಗಳು ಸಂಪೂರ್ಣವಾಗಿ ಸುರಕ್ಷಿತವಾಗಿವೆ: ರಾಜನಾಥ್‌ ಸಿಂಗ್‌

Last Updated 30 ಮಾರ್ಚ್ 2023, 14:50 IST
ಅಕ್ಷರ ಗಾತ್ರ

ನವದೆಹಲಿ: ‘ದೇಶದ ಗಡಿಗಳು ಸಂಪೂರ್ಣವಾಗಿ ಸುರಕ್ಷಿತವಾಗಿವೆ. ನಿರ್ದಿಷ್ಟ ದಾಳಿಯ (ಸರ್ಜಿಕಲ್‌ ಸ್ಟ್ರೈಕ್‌) ಮೂಲಕ ಭಯೋತ್ಪಾದಕರ ಸದ್ದಡಗಿಸಲಾಗಿದೆ’ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ತಿಳಿಸಿದ್ದಾರೆ.

ಗುರುವಾರ ಇಲ್ಲಿ ಹಮ್ಮಿಕೊಳ್ಳಲಾಗಿದ್ದ ಸಮ್ಮೇಳನವೊಂದನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಚೀನಾ ಅಥವಾ ಪಾಕಿಸ್ತಾನ, ಯಾವ ರಾಷ್ಟ್ರವೇ ಆಗಿದ್ದರೂ ಸರಿ ದುರುದ್ದೇಶಪೂರಿತ ದಾಳಿಗೆ ಮುಂದಾದಾಗಲೆಲ್ಲಾ ಭಾರತದ ಸಶಸ್ತ್ರ ಪಡೆಗಳು ತಕ್ಕ ಪ್ರತ್ಯುತ್ತರ ನೀಡಿವೆ’ ಎಂದರು.

‘ಭಯೋತ್ಪಾದನೆಯಂತಹ ವಿಷಯಗಳಲ್ಲಿ ಭಾರತವು ಇಡೀ ಜಗತ್ತನ್ನೇ ಮುನ್ನಡೆಸಿದೆ. ಈ ಅಪಾಯವನ್ನು ತೊಡೆದು ಹಾಕಲು ಅಗತ್ಯವಿರುವ ಬೆಂಬಲವನ್ನು ಪಡೆಯುವಲ್ಲಿ ಯಶಸ್ವಿಯೂ ಆಗಿದೆ’ ಎಂದು ತಿಳಿಸಿದರು.

‘ತನ್ನ ನೆಲದಲ್ಲಿ, ಅಗತ್ಯ ಬಿದ್ದರೆ ವಿದೇಶದಲ್ಲೂ ಭಯೋತ್ಪಾದಕರ ಮೇಲೆ ದಾಳಿ ನಡೆಸಬಲ್ಲ ಸಾಮರ್ಥ್ಯ ಭಾರತಕ್ಕಿದೆ ಎಂಬ ಸ್ಪಷ್ಟ ಸಂದೇಶವು ಇಡೀ ಜಗತ್ತಿಗೆ ರವಾನೆಯಾಗಿದೆ. ಕೇಂದ್ರ ಸರ್ಕಾರ ಈ ವಿಚಾರದಲ್ಲಿ ಹೊಂದಿರುವ ಬಲವಾದ ಇಚ್ಛಾಶಕ್ತಿಯ ಫಲಿತಾಂಶ ಇದಾಗಿದೆ’ ಎಂದು ಹೇಳಿದರು.

‘ಭಾರತವು ಅನಗತ್ಯವಾಗಿ ಯಾರಿಗೂ ಹಾನಿ ಮಾಡುವುದಿಲ್ಲ. ದೇಶದ ಏಕತೆ, ಸಮಗ್ರತೆ ಹಾಗೂ ಸಾರ್ವಭೌಮತ್ವಕ್ಕೆ ಧಕ್ಕೆ ಉಂಟುಮಾಡುವವರನ್ನು ಸುಮ್ಮನೆ ಬಿಡುವುದಿಲ್ಲ ಎಂಬುದು ಭಯೋತ್ಪಾದನೆಯನ್ನೇ ಅಸ್ತ್ರವಾಗಿಸಿಕೊಂಡಿರುವ ರಾಷ್ಟ್ರಗಳಿಗೆ ಚೆನ್ನಾಗಿ ಗೊತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಮುಂದಾಳತ್ವದಲ್ಲಿ ಭಾರತವು ಬಲಿಷ್ಠ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT