ಮಂಗಳವಾರ, ಮಾರ್ಚ್ 28, 2023
32 °C

ಕಲ್ಲಿದ್ದಲು ಆಮದು: ಮೇ ತಿಂಗಳಲ್ಲಿ ಶೇ 20ರಷ್ಟು ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಭಾರತದಲ್ಲಿ ಕಲ್ಲಿದ್ದಲು ಆಮದು ಪ್ರಮಾಣವು ಮೇ ತಿಂಗಳಲ್ಲಿ ಶೇ 20.4ರಷ್ಟು ಏರಿಕೆ ಕಂಡಿದ್ದು, 19.92 ದಶಲಕ್ಷ ಟನ್‌ಗಳಿಗೆ ತಲುಪಿದೆ.

ಎಂಜಂಕ್ಷನ್‌ ಸರ್ವೀಸಸ್‌ ಮಾಹಿತಿ ಪ್ರಕಾರ ಕಳೆದ ವರ್ಷದ ಮೇ ತಿಂಗಳಲ್ಲಿ 16.54 ದಶಲಕ್ಷ ಟನ್‌ ಕಲ್ಲಿದ್ದಲನ್ನು ಆಮದು ಮಾಡಿಕೊಳ್ಳಲಾಗಿತ್ತು. ವರ್ಷದಿಂದ ವರ್ಷಕ್ಕೆ ಕಲ್ಲಿದ್ದಲಿನ ಆಮದು ಪ್ರಮಾಣ ಹೆಚ್ಚಾಗುತ್ತಿದೆ.

ಪ್ರಸಕ್ತ ಹಣಕಾಸು ವರ್ಷದ ಮೊದಲ ಎರಡು ತಿಂಗಳಲ್ಲಿ ಭಾರತದ ಕಲ್ಲಿದ್ದಲು ಆಮದು ಶೇ 25.4 ರಷ್ಟು ಏರಿಕೆ ಕಂಡಿದ್ದು, 42.19 ದಶಲಕ್ಷ ಟನ್‌ಗೆ ತಲುಪಿತ್ತು. ಹಿಂದಿನ ಹಣಕಾಸು ವರ್ಷದ ಮೊದಲ ಎರಡು ತಿಂಗಳ ಅವಧಿಯಲ್ಲಿ 33.63 ದಶಲಕ್ಷ ಟನ್ ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು