ಶನಿವಾರ, ಏಪ್ರಿಲ್ 1, 2023
28 °C

ಭಯೋತ್ಪಾದನೆ ಕೊನೆಗಾಣಿಸಲು ಭಾರತ ನಿರಂತರ ಪ್ರಯತ್ನ: ಮನೋಜ್ ಸಿನ್ಹಾ

(ಐಎಎನ್‌ಎಸ್ Updated:

ಅಕ್ಷರ ಗಾತ್ರ : | |

ಜಮ್ಮು(ಶ್ರೀನಗರ): ಜಮ್ಮುವಿನಲ್ಲಿ 74 ನೇ ಗಣರಾಜ್ಯೋತ್ಸವ ಸಂಭ್ರಮದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆದಿಲ್ಲ. ಜಮ್ಮು ಮತ್ತು ಕಾಶ್ಮೀರದಲ್ಲಿ ಶಾಂತಿಯುತ ವಾತವರಣ ನೆಲೆ ನಿಂತಿದೆ ಎಂದು ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ತಿಳಿಸಿದರು.

ಇಲ್ಲಿನ ಮೌಲಾನಾ ಆಜಾದ್ ಕ್ರೀಡಾಂಗಣದಲ್ಲಿ ರಾಷ್ಟ್ರಧ್ವಜಾರೋಹಣ ಮಾಡಿ, ನಂತರ ಗೌರವ ವಂದನೆ ಸ್ವೀಕರಿಸಿದರು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ''ಕೇಂದ್ರಾಡಳಿತ ಪ್ರದೇಶದಲ್ಲಿ ಶಾಶ್ವತ ಶಾಂತಿಯನ್ನು ನೆಲೆಗೊಳಿಸಲು ಕೇಂದ್ರ ಸರ್ಕಾರ ನಿರಂತರ ಪ್ರಯತ್ನಿಸುತ್ತಿದೆ.  ಭಯೋತ್ಪಾದನೆ ಮತ್ತು ಅದನ್ನು ಬೆಂಬಲಿಸುವುದನ್ನು ಕೊನೆಗೊಳಿಸಲು ಭದ್ರತಾ ಪಡೆಗಳು ನಿರತವಾಗಿವೆ.

ಜಮ್ಮು ಮತ್ತು ಕಾಶ್ಮೀರದಲ್ಲಿ  ಕಾರ್ಯನಿರ್ವಹಿಸುತ್ತಿರುವ ಭದ್ರತಾ ಪಡೆಗಳ ಕಲ್ಯಾಣಕ್ಕಾಗಿ ಕೇಂದ್ರಾಡಳಿತ ಪ್ರದೇಶದದ ಆಡಳಿತ ಮತ್ತು ಕೇಂದ್ರವು ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಕೇಂದ್ರ ಸರ್ಕಾರವು ಕಾಶ್ಮೀರಿ ಪಂಡಿತರಿಂದ 8400 ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಅವರ ಭೂಮಿ ಮತ್ತು ಆಸ್ತಿಯನ್ನು 1990 ರಲ್ಲಿ ಬಲವಂತವಾಗಿ ವಶಪಡಿಸಿಕೊಳ್ಳಲಾಗಿದೆ. ಈ ಕುರಿತು ಪರಿಶೀಲಿಸಿಲಾಗಿದ್ದು, ಕಾಶ್ಮೀರಿ ಪಂಡಿತರ ಆಸ್ತಿ ಪತ್ರಗಳನ್ನು ಹಿಂದಿರುಗಿಸಲಾಗಿದೆ ಎಂದರು.

ಇಲ್ಲಿನ ಪರಿಸ್ಥಿತಿಯು ಸಹಜ ಸ್ಥಿತಿಗೆ ಮರಳುತ್ತಿದೆ. ಶತ್ರುಗಳ ಕುತಂತ್ರಗಳನ್ನು ವಿಫಲಗೊಳಿಸಲಾಗುತ್ತಿದೆ. 2022 ರಲ್ಲಿ ನಾಗರಿಕ ಹತ್ಯೆಗಳಲ್ಲಿ ಶೇ. 55ರಷ್ಟು ಇಳಿಕೆ ಕಂಡುಬಂದಿದೆ ಹಾಗೂ ಭದ್ರತಾ ಸಿಬ್ಬಂದಿಯ ಹತ್ಯೆಯಲ್ಲಿಯೂ ಕುಸಿತ ಕಂಡುಬಂದಿದೆ. ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವನ್ನು ಅಭಿವೃದ್ದಿ ಪಡಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಶೀಘ್ರದಲ್ಲೇ ಮೆಟ್ರೋ ಸಂಚಾರ ಕಾರ್ಯಗಳು ಆರಂಭವಾಗಲಿದೆ ಎಂದು ತಿಳಿಸಿದರು.         

 ಇದನ್ನು ಓದಿ: 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು