ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Covid-19 India Update: ದೇಶದಲ್ಲಿ 9.47 ಲಕ್ಷ ಸಕ್ರಿಯ ಪ್ರಕರಣಗಳು

Last Updated 29 ಸೆಪ್ಟೆಂಬರ್ 2020, 4:24 IST
ಅಕ್ಷರ ಗಾತ್ರ

ಬೆಂಗಳೂರು: ದೇಶದಾದ್ಯಂತ ಕೋವಿಡ್‌ ದೃಢಪಟ್ಟ ಒಟ್ಟು ಪ್ರಕರಣಗಳ ಸಂಖ್ಯೆ 61 ಲಕ್ಷ ದಾಟಿದೆ. ಕಳೆದ 24 ಗಂಟೆಗಳಲ್ಲಿ 70,589 ಹೊಸ ಪ್ರಕರಣಗಳು ದಾಖಲಾಗಿವೆ ಹಾಗೂ ಸೋಂಕಿನಿಂದ 776 ಮಂದಿ ಮೃತಪಟ್ಟಿದ್ದಾರೆ.

ಒಟ್ಟು 61,45,292 ಪ್ರಕರಣಗಳ ಪೈಕಿ 9,47,576 ಸಕ್ರಿಯ ಪ್ರಕರಣಗಳಿದ್ದು, 51,01,398 ಮಂದಿ ಗುಣಮುಖರಾಗಿದ್ದಾರೆ. ಈವರೆಗೂ 96,318 ಮಂದಿ ಸಾವಿಗೀಡಾಗಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ಸೆಪ್ಟೆಂಬರ್‌ 28ರ ವರೆಗೂ ದೇಶದಲ್ಲಿ 7,31,10,041 ಗಂಟಲು ಮಾದರಿಗಳಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗಿದೆ. ಸೋಮವಾರ ಒಂದೇ ದಿನ 11,42,811 ಕೋವಿಡ್‌ ಪರೀಕ್ಷೆಗಳನ್ನು ನಡೆಸಿರುವುದಾಗಿ ಐಸಿಎಂಆರ್‌ ತಿಳಿಸಿದೆ.

ಮಹಾರಾಷ್ಟ್ರದಲ್ಲಿ 2,73,646 ಸಕ್ರಿಯ ಪ್ರಕರಣಗಳು, ಕರ್ನಾಟಕದಲ್ಲಿ 1,04,743 ಪ್ರಕರಣಗಳು, ಆಂಧ್ರ ಪ್ರದೇಶದಲ್ಲಿ 64,876 ಹಾಗೂ ಉತ್ತರ ಪ್ರದೇಶದಲ್ಲಿ 55,603 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಸಚಿವಾಲಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT