ದೇಶದಲ್ಲಿ ಪ್ರತಿ ದಿನದ ಹೊಸ ಕೋವಿಡ್ ಪ್ರಕರಣಗಳ ಪ್ರಮಾಣದಲ್ಲಿ ಇಳಿಕೆ

ನವದೆಹಲಿ: ದೇಶದಲ್ಲಿ ಪ್ರತಿ ದಿನ ಹೊಸದಾಗಿ ಪತ್ತೆಯಾಗುತ್ತಿರುವ ಕೋವಿಡ್–19 ಪ್ರಕರಣಗಳ ಪ್ರಮಾಣ ಶೇ 4ಕ್ಕಿಂತ ಕಡಿಮೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.
ಈವರೆಗೆ 13.36 ಕೋಟಿ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ದಿನವೊಂದರಲ್ಲಿ 10,99,545 ಪರೀಕ್ಷೆಗಳನ್ನು ನಡೆಸಲಾಗಿದೆ. ಹೊಸ ಪ್ರಕರಣಗಳ ಒಟ್ಟು ಸಂಖ್ಯೆ ಮತ್ತು ಪ್ರತಿ ದಿನ ವರದಿಯಾಗುತ್ತಿರುವ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗಿದೆ ಎಂದು ಸಚಿವಾಲಯ ಹೇಳಿದೆ.
ಇದನ್ನೂ ಓದಿ: ಕೋವಿಡ್ ಲಸಿಕೆ ವಿತರಣೆಗೆ ಸಜ್ಜಾಗಲು ಪ್ರಧಾನಿ ಮೋದಿ ಸೂಚನೆ
ದೇಶದಲ್ಲಿ ಸತತ ಆರು ದಿನಗಳಿಂದ ಪ್ರತಿ 24 ಗಂಟೆ ಅವಧಿಯಲ್ಲಿ 40,000ಕ್ಕಿಂತಲೂ ಕಡಿಮೆ ಹೊಸ ಪ್ರಕರಣಗಳು ವರದಿಯಾಗಿವೆ. ನವೆಂಬರ್ 8ರ ನಂತರ ಪ್ರತಿ ದಿನ 50,000ಕ್ಕಿಂತಲೂ ಕಡಿಮೆ ಪ್ರಕರಣಗಳು ಪತ್ತೆಯಾಗಿವೆ ಎಂದು ಸಚಿವಾಲಯ ಮಾಹಿತಿ ನೀಡಿದೆ.
ದಿನವೊಂದಕ್ಕೆ ಸರಾಸರಿ 10 ಲಕ್ಷಕ್ಕಿಂತಲೂ ಹೆಚ್ಚು ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಆದಾಗ್ಯೂ ಹೊಸ ಪ್ರಕರಣಗಳ ಸಂಖ್ಯೆ ಕಡಿಮೆಯೇ ಇದೆ. ದೇಶದ ಪರೀಕ್ಷಾ ಸಾಮರ್ಥ್ಯ ಗಣನೀಯವಾಗಿ ಹೆಚ್ಚಾಗಿದೆ. ಸದ್ಯ ದೇಶದಲ್ಲಿ 2,134 ಪ್ರಯೋಗಾಲಯಗಳು ಕೋವಿಡ್ ಪರೀಕ್ಷೆ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿವೆ ಎಂದು ಸಚಿವಾಲಯ ಹೇಳಿದೆ.
ಇದನ್ನೂ ಓದಿ: Covid-19 India Update: ದೇಶದಲ್ಲಿ ಒಟ್ಟು ಪ್ರಕರಣಗಳ ಪೈಕಿ ಶೇ 93.76 ಗುಣಮುಖ
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.