ಸೋಮವಾರ, ಡಿಸೆಂಬರ್ 6, 2021
24 °C
ವರ್ಚ್ಯುವಲ್ ಕಾರ್ಯಕ್ರಮದಲ್ಲಿ ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಉದ್ಘಾಟನೆ

ತಂಜಾವೂರಿನಲ್ಲಿ ದೇಶದ ಮೊದಲ ಆಹಾರ ಮ್ಯೂಸಿಯಂ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ತಂಜಾವೂರು: ತಮಿಳುನಾಡಿನ ತಂಜಾವೂರಿನಲ್ಲಿ ಸೋಮವಾರ ದೇಶದ ಮೊದಲ ಆಹಾರ ವಸ್ತು ಸಂಗ್ರಹಾಲಯವನ್ನು (ಮ್ಯೂಸಿಯಂ) ಕೇಂದ್ರ ವಾಣಿಜ್ಯ, ಕೈಗಾರಿಕೆ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವ ಪೀಯೂಷ್ ಗೋಯಲ್ ಅವರು ವರ್ಚುವಲ್‌ ಕಾರ್ಯಕ್ರಮದ ಮೂಲಕ ಉದ್ಘಾಟಿಸಿದರು. 

ದೆಹಲಿಯಲ್ಲಿ ವರ್ಚುವಲ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಪೀಯೂಷ್ ಗೋಯಲ್ ಅವರು, ಭಾರತವು ವಿಶ್ವದ ಪ್ರಸ್ತುತ ಐದನೇ  ಅತಿದೊಡ್ಡ ಕೃಷಿ ರಫ್ತುದಾರ ರಾಷ್ಟ್ರವಾಗಿದೆ. ವಿಶ್ವವು ನ‌ಮ್ಮ ದೇಶವನ್ನು ವಿಶ್ವಾಸಾರ್ಹ ಪಾಲುದಾರನನ್ನಾಗಿ ನೋಡುತ್ತಿದೆ. ಜಾಗತಿಕ ಪೂರೈಕೆದಾರರಾಗಲು ರೈತರ ಉತ್ಪನ್ನಗಳನ್ನು ಜಗತ್ತಿಗೆ ಕೊಂಡೊಯ್ಯುವಲ್ಲಿ ಗುಣಮಟ್ಟ ಮತ್ತು ಉತ್ಪಾದಕತೆಯ ಮೇಲೆ ಕೇಂದ್ರೀಕರಿಸುವ ಅಗತ್ಯವಿದೆ’ ಎಂದರು. 

‘ಈ ನಿಟ್ಟಿನಲ್ಲಿ ನಾವು ಆತ್ಮನಿರ್ಭರ ಭಾರತ ಮಿಷನ್‌ ಅಡಿ ಕೆಲಸವನ್ನು ಮುಂದುವರಿಸುತ್ತೇವೆ. ದೇಶದ ಆಹಾರ ಭದ್ರತೆಯ ಕಥೆಯನ್ನು ಚಿತ್ರಿಸುವಲ್ಲಿ ತಂಜಾವೂರಿನ ಆಹಾರ ವಸ್ತುಸಂಗ್ರಹಾಲಯವು ಮೊದಲನೆಯದು. ತಂಜಾವೂರು ತಮಿಳುನಾಡಿನ ಸಾಂಸ್ಕೃತಿಕ ರಾಯಭಾರಿಯಾಗಿತ್ತು. ಆದರೆ, ಈಗ ತಮಿಳುನಾಡು ಭಾರತದ ಕೃಷಿ ಇತಿಹಾಸದ ತವರು ಆಗಲಿದೆ’ ಎಂದು ಹೇಳಿದರು.

ಇದೇ ವೇಳೆ ಭಾರತ ಆಹಾರ ನಿಗಮವು (ಎಫ್‌ಸಿಐ) ಹುಬ್ಬಳ್ಳಿಯಲ್ಲಿ ಆರಂಭಿಸಿರುವ ನೂತನ ವಿಭಾಗೀಯ ಕಚೇರಿ ಕುರಿತು ಪೀಯೂಷ್ ಗೋಯಲ್ ಅವರು ಅಭಿನಂದನೆ ಸಲ್ಲಿಸಿದರು. 

‘ಆಹಾರ ಭದ್ರತೆಗಾಗಿ ಚೇತರಿಸಿಕೊಳ್ಳುವ ಮೂಲಸೌಕರ್ಯಗಳ ಪ್ರಧಾನಿ ನರೇಂದ್ರ ಮೋದಿಯವರ ದೃಷ್ಟಿಯನ್ನು ಸಾಕಾರಗೊಳಿಸುವತ್ತ ಇದು ಒಂದು ಹೆಜ್ಜೆಯಾಗಿದೆ’ ಎಂದರು. 

ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಹಲವು ಸಾಧನೆಗಳನ್ನು ಸ್ಮರಿಸಿದ ಅವರು, ‘ಕೇಂದ್ರವು ದೌರ್ಜನ್ಯತಡೆ ಕಾಯ್ದೆಯನ್ನು ಬಲಪಡಿಸಿದೆ. ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ವಸ್ತು ಸಂಗ್ರಹಾಲಯಗಳನ್ನು ಸ್ಥಾಪಿಸುತ್ತಿದೆ’ ಎಂದೂ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು